Mon. Dec 23rd, 2024

ಗ್ಯಾರಂಟಿ ಯೋಜನೆಗಳಿಗೆ ಕತ್ತರಿ ಹಾಕುವುದಿಲ್ಲ: ಡಿಕೆಶಿ ಸ್ಪಷ್ಟ ನುಡಿ

Share this with Friends

ಬೆಂಗಳೂರು,ಆ.14: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ಬದಲಾವಣೆ ಮಾಡುವುದಿಲ್ಲ, ಕತ್ತರೀನೂ ಹಾಕಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್‌ ಸ್ಪಷ್ಟಪಡಿಸಿದ್ದಾರೆ.

ಪದ್ಮನಾಭನಗರದಲ್ಲಿ ಗ್ಯಾರಂಟಿ ಅನುಷ್ಠಾನ ಕೇಂದ್ರವನ್ನು ಉದ್ಘಾಟಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ,ಗ್ಯಾರಂಟಿ ಯೋಜನೆಗಳಿಗೆ ಕತ್ತರಿ ಹಾಕಲಾಗುತ್ತದೆ ಎಂಬ ಸುದ್ದಿ ಹರಡಿದೆ, ಇದೆಲ್ಲ ಸುಳ್ಳು,ನಾನು ಪಕ್ಷದ ಅಧ್ಯಕ್ಷನಾಗಿ ಹೇಳುತ್ತಿದ್ದೇನೆ,ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಮತ್ತೆ ಸ್ಪಷ್ಟಪಡಿಸಿದರು.

ಕೆಲವು ಕಡೆ ಆದಾಯ ಹೆಚ್ಚಳ ಇರುವವರು ಕೂಡಾ ಗ್ಯಾರಂಟಿ ಯೋಜನೆಯ ಲಾಭವನ್ನು ಪಡೆದುಕೊಳ್ಳುತ್ತಿದ್ದಾರೆ, ಅಂತವುಗಳನ್ನು ಪರಿಶೀಲನೆ ಮಾಡುತ್ತೇವೆ ಎಂದು ಹೇಳಿದರು.

ಶಾಸಕರಿಗೆ, ಸಚಿವರಿಗೆ ಅನುದಾನ ಸಿಗುತ್ತಿಲ್ಲ‌ ಎಂಬ ಮಾತಿದಿಯಲ್ಲ ಎಂಬ ಪ್ರಶ್ನೆಗೆ ಅದು ಸುಳ್ಳು ಎಂದು ಡಿಕೆಶಿ ತಿಳಿಸಿದರು.

ಅಭಿವೃದ್ಧಿ ಯೋಜನೆಗಳಿಗೆ ಹಣ ಸಿಗುತ್ತಿಲ್ಲ ಎಂದು ಮುನಿಯಪ್ಪ ಹೇಳಿದ್ದಾರಲ್ಲಾ ಎಂದುದಕ್ಕೆ ಅವರು ಹಾಗೆ ಹೇಳಿಲ್ಲ, ಏನು ಕೊಡಬೇಕೋ ಅದನ್ನು ಕೊಟ್ಟಿದ್ದೇವೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.


Share this with Friends

Related Post