Mon. Dec 23rd, 2024

ಒಂದು ದೇಶ, ಒಂದು ಚುನಾವಣೆ: ಹೇಮಾ ನಂದೀಶ್ ಶ್ಲಾಘನೆ

Share this with Friends

ಮೈಸೂರು: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಒಂದು ದೇಶ, ಒಂದು ಚುನಾವಣೆ ನಿರ್ಧಾರ ಸಮರ್ಥವಾದುದು ಎಂದು ಮೈಸೂರು ನಗರ ಬಿಜೆಪಿ ಉಪಾಧ್ಯಕ್ಷೆ ಹೇಮಾ ನಂದೀಶ್ ಶ್ಲಾಘಿಸಿದ್ದಾರೆ.

ಕೇಂದ್ರದ ಈ ನಿರ್ಣಯ ಚುನಾವಣೆ ವ್ಯವಸ್ಥೆಯಲ್ಲಿ ಒಂದು ಕ್ರಾಂತಿಕಾರಿ ಹೆಜ್ಜೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಲೋಕಸಭೆ ಮತ್ತು ಎಲ್ಲ ರಾಜ್ಯಗಳ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವುದು ಮತ್ತು ಈ ಸಾರ್ವತ್ರಿಕ ಚುನಾವಣೆ ನಡೆದ 100 ದಿನಗಳ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಉದ್ದೇಶವಿರುವುದರಿಂದ ಒಂದೇ ಮತದಾರರ ಪಟ್ಟಿ ಎಲ್ಲಾ ಚುನಾವಣೆಗೂ ಬಳಕೆಗೆ ಅವಕಾಶವಿದೆ,ಹಾಗಾಗಿ‌ ಸಮಯದ ಜತೆಗೆ ಹಣ ಉಳಿತಾಯವಾಗಲಿದೆ ಎಂದು ಹೇಮಾನಂದೀಶ್ ತಿಳಿಸಿದ್ದಾರೆ.


Share this with Friends

Related Post