Fri. Nov 1st, 2024

ತುಪ್ಪದ ಸ್ಯಾಂಪಲ್ಸ್ ಪರಿಶೀಲನೆಗೆ ದಿನೇಶ್ ಗುಂಡೂರಾವ್ ಸೂಚನೆ

Share this with Friends

ಬೆಂಗಳೂರು: ನಂದಿನಿ ತುಪ್ಪ ಹೊರತುಪಡಿಸಿ, ರಾಜ್ಯದಲ್ಲಿ ಮಾರಾಟವಾಗುತ್ತಿರುವ ಉಳಿದ ತುಪ್ಪದ ಸ್ಯಾಂಪಲ್‌ಗಳನ್ನು ಸಂಗ್ರಹಿಸಿ ಪರಿಶೀಲಿಸಬೇಕೆಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.

ಇದು ಪ್ರಸಾದಗಳ ಸ್ಯಾಂಪಲ್ ಪರಿಶೀಲನೆಯಲ್ಲ, ನೇರವಾಗಿ ತುಪ್ಪವನ್ನೇ ಪರಿಶೀಲನೆ ಮಾಡಬೇಕೆಂದು ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆಗೆ ಸಚಿವರು ಸೂಚಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಳಸುತ್ತಿರುವ ತುಪ್ಪದ ಬಗ್ಗೆ ತಪಾಸಣೆ ಮಾಡಲು ನಮ್ಮ ಆಹಾರ ಸುರಕ್ಷತಾ ಆಯುಕ್ತರಿಗೆ ಹೇಳಿದ್ದೇನೆ. ಈಗಾಗಲೇ ಸ್ಯಾಂಪಲ್ ಕಲೆಕ್ಟ್ ಮಾಡುವ ಪ್ರಕ್ರಿಯೆ ಆರಂಭವಾಗಿದೆ ಎಂದು ತಿಳಿಸಿದರು.

ತಿರುಪತಿ ಲಡ್ಡು ತಯಾರಿಕೆಯಲ್ಲಿ ಕೊಬ್ಬಿನ ಅಂಶ ಬಳಕೆಯಾಗಿದೆ ಎಂಬ ವಿಚಾರದಿಂದ ರಾಜ್ಯದಲ್ಲೂ ಎಚ್ಚರಿಕೆ ವಹಿಸಲಾಗಿದೆ, ಇಲ್ಲಿ ಬಳಕೆಯಾಗುತ್ತಿರುವ ತುಪ್ಪದಲ್ಲಿ ಕೊಬ್ಬಿನ ಅಂಶ ಇದೆಯೆ ಎಂಬುದನ್ನು ಪರಿಶೀಲಿಸಲಾತ್ತಿದೆ, ತಮಿಳುನಾಡು ಸೇರಿದಂತೆ ಬೇರೆ ಬೇರೆ ರಾಜ್ಯಗಳಿಂದ ಇಲ್ಲಿಗೆ ತುಪ್ಪ ಬರುತ್ತದೆ ಹಾಗಾಗಿ ಪರಿಶೀಲನೆ ಮಾಡಲೇಬೇಕಿದೆ ಎಂದರು.

ಪ್ರಸಾದದ ಪರಿಶೀಲನೆ ನಾವು ಮಾಡುತ್ತಿಲ್ಲ. ಬೇರೆ ಪದಾರ್ಥಗಳಲ್ಲಿ ಕಲಬೆರಕೆ ಆಗುವ ಸಾಧ್ಯತೆ ಕಡಿಮೆ. ಆದರೆ ಆಂಧ್ರ ಮುಖ್ಯಮಂತ್ರಿ ತುಪ್ಪದಲ್ಲಿ ಬೇರೆ ಬೇರೆ ಕೊಬ್ಬಿನಾಂಶ ಇತ್ತೆಂದು ಹೇಳಿರುವುದು ಆತಂಕಕಾರಿಯಾದ ವಿಚಾರ. ಒಬ್ಬ ಸಿಎಂ ಹೇಳಿದ ಮೇಲೆ ನಾವು ಅದನ್ನು ಗಂಭೀರವಾಗಿ ಪರಿಗಣಿಸಲೇಬೇಕಿದೆ ದೇವರ ಬಗ್ಗೆ ಶ್ರದ್ಧೆ ಇರೋರಿಗೆ ಈ ವಿಚಾರ ಬಹಳ ಆಘಾತಕಾರಿ ಎಂದು ದಿನೇಶ್ ತಿಳಿಸಿದರು

ಜನರಿಗೆ ಈ ವಿಚಾರದಲ್ಲಿ ಬಹಳ ಗೊಂದಲ ಶುರುವಾಗಿದೆ, ತಿರುಪತಿ ಲಡ್ಡು ವಿಚಾರದಲ್ಲಿ ಈ ರೀತಿ ಇದೆ ಎಂದು ಆದಾಗ ಯಾರನ್ನ ನಂಬಬೇಕು ಅನ್ನುವ ಪ್ರಶ್ನೆ ಎದುರಾಗಿದೆ. ನಾಳೆ ಪ್ರಸಾದವನ್ನು ಸ್ವೀಕರಿಸದೆ ಇರುವಂತ ಪರಿಸ್ಥಿತಿ ಎದುರಾಗಬಹುದು ಎಂದು ‌ದಿನೇಶ್ ಗುಂಡೂರಾವ್ ಆತಂಕ ವ್ಯಕ್ತಪಡಿಸಿದರು.


Share this with Friends

Related Post