Mon. Dec 23rd, 2024

ಲಡ್ಡುವಿಗೆ ಕೊಬ್ಬು ಬಳಕೆ:ಪ್ರಾಯಶ್ಚಿತ ದೀಕ್ಷೆತೊಟ್ಟ ಪವನ್ ಕಲ್ಯಾಣ್‌

Share this with Friends

ಬೆಂಗಳೂರು: ತಿರುಪತಿಯಲ್ಲಿ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ವರದಿಯ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಕ್ಷಮೆ ಕೋರಿ ಆಂಧ್ರಪ್ರದೇಶ ಡಿಸಿಎಂ ಪವನ್ ಕಲ್ಯಾಣ್ ಸೆ.22 ರಿಂದ 11 ದಿನದ ಪ್ರಾಯಶ್ಚಿತ ದೀಕ್ಷೆ ಕೈಗೊಂಡಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪವನ್ ಕಲ್ಯಾಣ್ ಪೋಸ್ಟ್ ಮಾಡಿದ್ದು, ತಿರುಪತಿ ಲಡ್ಡು ಅಂದರೆ ಅಮೃತಕ್ಕೆ ಸಮನಾಗಿ ನೋಡುತ್ತೇವೆ,ಈ ಲಡ್ಡು ಪ್ರಸಾದ ಅಶುದ್ಧವಾಗಿದೆ,ಈ ಪಾಪವನ್ನು ಆರಂಭದಲ್ಲೇ ಪತ್ತೆ ಹಚ್ಚಲು ಸಾಧ್ಯವಾಗದಿರುವುದಕ್ಕೆ ಪಶ್ಚಾತ್ತಾಪವಾಗಿದೆ ಎಂದಿದ್ದಾರೆ.

ಲಡ್ಡು ಪ್ರಸಾದದಲ್ಲಿ ಪ್ರಾಣಿ ಕೊಬ್ಬು ಬೆರಸಿರುವುದು ಗೊತ್ತಾದಾಗ ಶಾಕ್ ಆದೆ,ನಾನು ತಪ್ಪಿತಸ್ಥ ಎಂಬ ಭಾವನೆ, ಜನರ ಹಿತಕ್ಕಾಗಿ ಹೋರಾಟ ನಡೆಸುತ್ತಿರುವ ನನಗೆ ಆರಂಭದಲ್ಲಿ ಇಂತಹ ತೊಂದರೆಗಳು ಗಮನಕ್ಕೆ ಬಾರದಿರುವುದು ನೋವು ತಂದಿದೆ ಎಂದು ‌ಬರೆದಿದ್ದಾರೆ.

ಅದರ ಭಾಗವಾಗಿ ನಾನು ಪ್ರಾಯಶ್ಚಿತ್ತ ದೀಕ್ಷೆಯನ್ನು ಮಾಡುವ ಸಂಕಲ್ಪವನ್ನು ಕೈಗೊಂಡಿದ್ದೇನೆ.ಸೆಪ್ಟೆಂಬರ್ 22 ಭಾನುವಾರ ಬೆಳಗ್ಗೆ ಗುಂಟೂರು ಜಿಲ್ಲೆಯ ನಂಬೂರಿನಲ್ಲಿ ಶ್ರೀ ದಶಾವತಾರ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ದೀಕ್ಷೆಯನ್ನು ಕೈಗೊಳ್ಳುತ್ತಿದ್ದೇನೆ. ಇಂದಿನಿಂದ 11 ದಿನಗಳ ಕಾಲ ದೀಕ್ಷೆಯನ್ನು ಮಾಡುತ್ತೇನೆ. ಬಳಿಕ ತಿರುಮಲಕ್ಕೆ ಭೇಟಿ ನೀಡುತ್ತೇನೆ ಎಂದು ತಿಳಿಸಿದ್ದಾರೆ‌


Share this with Friends

Related Post