Thu. May 8th, 2025

ಸಿದ್ದರಾಮಯ್ಯಗೆ ಹೈಕೋರ್ಟ್ ನಲ್ಲಿ ಬಿಗ್ ಶಾಕ್

Share this with Friends

ಬೆಂಗಳೂರು: ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ‌ ಹೈಕೋರ್ಟ್ ನಲ್ಲಿ ಬಿಗ್ ಶಾಕ್ ಉಂಟಾಗಿದ್ದು,ಅವರಿಗೆ ಮಂಗಳವಾರ ಅಮಂಗಳವಾಗಿದೆ

ಮುಡಾ‌ ಹಗರಣದಲ್ಲಿ ರಾಜ್ಯಪಾಲರ‌ ಪ್ರಾಸಿಕ್ಯೂಶನ್ ಪ್ರಶ್ನಿಸಿ ಸಿಎಂ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಮುಡಾ ಪ್ರಕರಣದಲ್ಲಿ ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿ ಹೈಕೋರ್ಟ್ ರಾಜ್ಯಪಾಲರ ಆದೇಶವನ್ನು ಎತ್ತಿಹಿಡಿದಿದೆ.

ಸಿದ್ದರಾಮಯ್ಯ ಅವರ‌‌ ವಿರುದ್ಧ ತನಿಖೆ ನಡೆಸಬಹುದು ಎಂದು ನ್ಯಾ. ನಾಗಪ್ರಸನ್ನ ಅವರು ಆದೇಶಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ


Share this with Friends

Related Post