Mon. Dec 23rd, 2024

ಫೆ.21 ರಂದು ಎಲ್ಲ ಶಾಸಕರ ಕಚೇರಿ ಮುಂದೆ ಅಂಗನವಾಡಿ ಕಾರ್ಯಕರ್ತೆಯರ ಧರಣಿ

Share this with Friends

ಫೆ.21 ರಂದು ಎಲ್ಲ ಶಾಸಕರ ಕಚೇರಿ ಮುಂದೆ
ಅಂಗನವಾಡಿ ಕಾರ್ಯಕರ್ತೆಯರ ಧರಣಿ

ಬೆಂಗಳೂರು, ಫೆ.19: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗೌರವಧನ ಹೆಚ್ಚಿಸುವಂತೆ ಒತ್ತಾಯಿಸಿ‌‌ ಇದೇ 21ರಂದು ಧರಣಿ ಹಮ್ಮಿಕೊಳ್ಳಲಾಗಿದೆ.

ಈ‌ ಬಾರಿಯ ಬಜೆಟ್ ನಲ್ಲಿ ವಿವಿಧ ಯೋಜನೆಗಳಡಿ ಸ್ಕೀಮ್ ವರ್ಕರ್ಸ್ ಗಳಾಗಿ ದುಡಿಯುತ್ತಿರುವ ಮಹಿಳಾ ಸಮುದಾಯವನ್ನು ಸಬಲೀಕರಣ ಗೊಳಿಸುವ ಬಗ್ಗೆ ನಿರ್ಲಕ್ಷಿಸಿರುವುದು ನಿರಾಶೆಯನ್ನುಂಟು ಮಾಡಿದೆ ಎಂದು‌ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ (ಎಐಟಿಯುಸಿ) ರಾಜ್ಯಾಧ್ಯಕ್ಷ
ಬಿ.ಅಮ್ಮದ್ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಜಯಮ್ಮ ತಿಳಿಸಿದ್ದಾರೆ.

ಕಳೆದ ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಹಾಗೂ ಕಾಂಗ್ರೆಸ್ ಪಕ್ಷದ ನಾಯಕಿ ಪ್ರಿಯಾಂಕ ಗಾಂಧಿಯವರು ಆರನೇ ಗ್ಯಾರೆಂಟಿಯಾಗಿ ಘೋಷಿಸಿದ ಅಂಗನವಾಡಿ ಕಾರ್ಯಕರ್ತೆಯರಿಗೆ 15000 ಹಾಗೂ ಸಹಾಯಕಿಯರಿಗೆ 10,000 ರೂ ಮಾಸಿಕ ಗೌರವದನವನ್ನು ಹೆಚ್ಚಳ ಭರವಸೆಯನ್ನು ಈಡೇರಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ಸ್ಕೀಮ್ ವರ್ಕಸ್ ಗಳ ಗೌರವಧನ ಹೆಚ್ಚಿಸುವ ಭರವಸೆಯನ್ನು ಪ್ರಸಕ್ತ ಆರ್ಥಿಕ ಸಾಲಿನಲ್ಲಿಯೇ ಜಾರಿಗೊಳಿಸಬೇಕೆಂದು ಶಾಸಕರು ಸದನಲ್ಲಿ ಧ್ವನಿ ಎತ್ತಬೇಕೆಂದು ಆಗ್ರಹಿಸಿ ಫೆ. 21 ರಂದು ರಾಜ್ಯಾದ್ಯಂತ ಎಲ್ಲಾ ಶಾಸಕರ ಕಚೇರಿ ಮುಂದೆ ಧರಣಿ ಹಮ್ಮಿಕೊಂಡಿದ್ದೇವೆ ಎಂದು ಜಯಮ್ಮ ತಿಳಿಸಿದ್ದಾರೆ.


Share this with Friends

Related Post