Mon. Dec 23rd, 2024

ಬಿಜೆಪಿ ಭ್ರಷ್ಟರ ವಿರುದ್ಧ ಕ್ರಮ ಕೈಗೊಳ್ಳಿ: ಸಿದ್ದರಾಮಯ್ಯ‌ ಆಗ್ರಹ

Share this with Friends

ಮೈಸೂರು: ಬಿಜೆಪಿಯಲ್ಲೇ ಬಹಳ ಭ್ರಷ್ಟಾಚಾರಿಗಳಿದ್ದು, ಪ್ರಧಾನಿ ಮೋದಿಯವರು ಅವರ ಮೇಲೆ ಮೊದಲು ಕ್ರಮ ಕೈಗೊಳ್ಳಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೈಸೂರಿನಲ್ಲಿ ‌ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಮೋದಿಯವರು ಮಣಿಪುರದ ಹಿಂಸೆಯ ಬಗ್ಗೆ ಮಾತನಾಡುವುದಿಲ್ಲ ಅಲ್ಲಿಗೆ ಭೇಟಿ ಕೂಡಾ ನೀಡಲಿಲ್ಲ ಏಕೆ ಎಂದು ಪ್ರಶ್ನಿಸಿದರು.

ಕುಮಾರಸ್ವಾಮಿ ಸುಳ್ಳು ಹೇಳುತ್ತಾರೆ,ಸುಳ್ಳು ಹೇಳಿಕೆಗಳಿಗೆ ನಾನು ಉತ್ತರ ಕೊಡಲ್ಲ,ಎಂದು ಹೇಳಿದರು.

ಕುಮಾರಸ್ವಾಮಿ ಪತ್ರಿಕಾ ಗೋಷ್ಟಿಯಲ್ಲಿ ನೀಡಿರುವ ಹೇಳಿಕೆ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ, ಕುಮಾರಸ್ವಾಮಿಯವರ ಎಲ್ಲ ಹೇಳಿಕೆಗಳು ಸುಳ್ಳಿನಿಂದ ಕೂಡಿದೆ, ಅವರ ಎಲ್ಲ ಹೇಳಿಕೆಗೆ ಪ್ರತಿಕ್ರಿಯೆ ನೀಡುವ ಅವಶ್ಯಕತೆಯಿಲ್ಲ ಎಂದು ಉತ್ತರಿಸಿದರು.

ಪೊನ್ನಣ್ಣ ಅವರು ನನ್ನ ಕಾನೂನು ಸಲಹೆಗಾರರು,ಹಾಗಾಗಿ ಪ್ರತಿದಿನ ಅವರೊಂದಿಗೆ ಕಾನೂನಿನ ಬಗ್ಗೆ ಚರ್ಚೆ ನಡೆಸುತ್ತೇನೆ ಇಂದು ಅವರು ನನ್ನನ್ನು ಭೇಟಿಯಾದರು,ಅದರಲ್ಲಿ ವಿಶೇಷ ಏನಿಲ್ಲ ಎಂದು ಮಾಧ್ಯಮದವರ ಪ್ರಶ್ನೆಗೆ ಸಿಎಂ ಉತ್ತರಿಸಿದರು.


Share this with Friends

Related Post