ಬೆಂಗಳೂರು: ಅತ್ಯಾಚಾರ, ಜಾತಿ ನಿಂದನೆ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ಅವರ ನಿವಾಸದ ಮೇಲೆ ಬೆಳ್ಳಂಬೆಳಿಗ್ಗೆ ಎಸ್‌ಐಟಿ ಅಧಿಕಾರಿಗಳು ದಾಳಿ ನಡೆಸಿದರು.
ವೈಯಾಲಿ ಕಾವಲ್‌ನಲ್ಲಿರುವ ಮುನಿರತ್ನ ಅವರ ನಿವಾಸ ಹಾಗೂ ಕಚೇರಿ ಸೇರಿದಂತೆ 15ಕ್ಕೂ ಹೆಚ್ಚು ಸ್ಥಳಗಳ ಮೇಲೆ ಎಸಿಪಿ ಕವಿತಾ ನೇತೃತ್ವದ ಎಸ್‌ಐಟಿ ತಂಡ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದೆ.
ಎಫ್ಎಸ್ಎಲ್ ತಂಡದೊಂದಿಗೆ ಎಸ್‌ಐಟಿ ಅಧಿಕಾರಿಗಳು ದಾಳಿ ನಡೆಸಿ ಸಾಕ್ಷ್ಯಗಳನ್ನು ಕಲೆ ಹಾಕಿದ್ದಾರೆ.
ಗುತ್ತಿಗೆದಾರ ಚಲುವರಾಜು ಅವರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಮುನಿರತ್ನ ಅವರನ್ನು ಬಂಧನವಾಗಿತ್ತು.
ಈ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಅವರು ನಂತರ ಜಾಮೀನಿನ ಮೇಲೆ ಬಿಡುಗಡೆಯಾದರು.ಆದರೆ ಜೈಲಿಂದ ಹರಬಂದ ನಂತರ ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನಕ್ಕೊಳಗಾದರು.