Mon. Dec 23rd, 2024

ಮಟ್ಟನವಿಲೆ ಸರ್ಕಾರಿ ಪ್ರೌಢಶಾಲೆಗೆಅಕ್ಷರ ದಾಸೋಹ ತಾಲ್ಲೂಕು ಅಧಿಕಾರಿಗಳು ಭೇಟಿ

Share this with Friends

ಚನ್ನರಾಯಪಟ್ಟಣ,ಅ.1:ಚನ್ನರಾಯಪಟ್ಟಣ ತಾಲ್ಲೂಕಿನ ಮಟ್ಟನವಿಲೆ ಸರ್ಕಾರಿ ಪ್ರೌಢಶಾಲೆಗೆ ಚನ್ನರಾಯಪಟ್ಟಣ ತಾಲೂಕಿನ ಅಕ್ಷರ ದಾಸೋಹ ತಾಲ್ಲೂಕು ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

ತಾಲೂಕು ಅಧಿಕಾತಿಗಳಾದ ಉಮಾಶಂಕರ್ ಭೇಟಿ ನೀಡಿ ಶಾಲೆಯಲ್ಲಿ ಬಿಸಿಯೂಟದ ವ್ಯವಸ್ಥೆಯನ್ನು ವೀಕ್ಷಿಸಿದರು.

ಮಕ್ಕಳಿಗೆ ಪೂರಕ ಪೌಷ್ಠಿಕ ಆಹಾರ ಯೋಜನೆ, ವಾರದಲ್ಲಿ 6 ದಿನಗಳು ಮೊಟ್ಟೆ ನೀಡುವ ಕಾರ್ಯಕ್ರಮದ ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು.

ಜತೆಗೆ ಮಕ್ಕಳಿಂದ ಶೈಕ್ಷಣಿಕ ಪ್ರಗತಿಯ ಮಾಹಿತಿ ಪಡೆದುಕೊಂಡರು.

ಈ ವೇಳೆ ಶಾಲೆಯ ಮುಖ್ಯೋಪಾಧ್ಯಾಯರಾದ ಭಾಗ್ಯಲಕ್ಷ್ಮಿ ಕೆ. ಕೆ. ಶಾಲಾ ಸಿಬ್ಬಂದಿ ವರ್ಗ, ಅಡುಗೆ ಸಿಬ್ಬಂದಿ, ಎಸ್ ಡಿ ಎಂ ಸಿ ಸದಸ್ಯರು ಉಪಸ್ಥಿತರಿದ್ದರು.


Share this with Friends

Related Post