Fri. Nov 1st, 2024

ಸುಳ್ಳಿನ ಉತ್ಪಾದನೆಯಲ್ಲಿ ಬಿಜೆಪಿಯವರು ನಿಸ್ಸೀಮರು-ಸಿದ್ದರಾಮಯ್ಯ ಟಾಂಗ್

Share this with Friends

ಬೆಂಗಳೂರು, ಫೆ. 20: ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕೇವಲ 9 ತಿಂಗಳಲ್ಲಿ 77 ಸಾವಿರ ಕೋಟಿ ಹೂಡಿಕೆ ಬಂದಿದೆ,ಇದು ರಾಜ್ಯದ ಕಾನೂನು ಸುವ್ಯವಸ್ಥೆ ಸುಗಮ ಇರುರುವುದಕ್ಕೆ ಸಾಕ್ಷಿ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸಭೆಯಲ್ಲಿಂದು ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರ ನೀಡಿ ಸಿಎಂ ಮಾತನಾಡಿದರು.

ಸರ್ಕಾರದ ಅಭಿವೃದ್ಧಿ ಮತ್ತು ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಜಾರಿ ಮತ್ತು ಜನಪರ ಯೋಜನೆಗಳಿಗೆ ರಾಜ್ಯಪಾಲರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ,ನಾವು ರಾಜ್ಯಪಾಲರಿಂದ ಸುಳ್ಳು ಹೇಳಿಸಿಲ್ಲ,ಅದೇನಿದ್ದರೂ ಬಿಜೆಪಿಯವರದ್ದು ಎಂದು ಟಾಂಗ್ ನೀಡಿದರು.

ಪ್ರತಿ ಪಕ್ಷ ನಾಯಕ ಆರ್.ಅಶೋಕ್ ಅವರು ರಾಜ್ಯಪಾಲರು ಮಾತಾಡಿದ್ದನ್ನು ಬಿಟ್ಟು ಅವರು ಮಾತಾಡದ್ದನ್ನೆಲ್ಲಾ ಪ್ರಸ್ತಾಪಿಸಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಸುಳ್ಳು ಸುಳ್ಳೇ ಆರೋಪ ಮಾಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಉಳಿದಂತೆ ಆರ್.ಅಶೋಕ್ ಅವರ ಆರೋಪ ಮತ್ತು ಸುಳ್ಳುಗಳಿಗೆ ಗೃಹ ಸಚಿವ ಪರಮೇಶ್ವರ್ ಅವರು ಈಗಾಗಲೇ ಸ್ಪಷ್ಟ ಉತ್ತರ ನೀಡಿದ್ದಾರೆ. ಉಳಿದದ್ದಕ್ಕೂ ಉತ್ತರ ನೀಡುತ್ತಾರೆ ಎಂದರು.

ಬಿಜೆಪಿ ಎಂದರೆ ಸುಳ್ಳು, ಸುಳ್ಳಿನ ಉತ್ಪಾದನೆಯಲ್ಲಿ ಬಿಜೆಪಿಯವರು ನಿಸ್ಸೀಮರು. ಅಭಿವೃದ್ಧಿ ಮರೆತು ಸುಳ್ಳುಗಳ ಆಸರೆ ಹೋಗಿದ್ದ ಬಿಜೆಪಿಯನ್ನು ರಾಜ್ಯದ ಜನತೆ ತಿರಸ್ಕರಿಸಿದ್ದಾರೆ. ಇದು ರಾಜ್ಯದ ಜನತೆ ಕೊಟ್ಟಿರುವ ಸರ್ಟಿಫಿಕೇಟ್ ಎಂದು ಸಿದ್ದು ವ್ಯಂಗ್ಯವಾಡಿದರು.

ರಾಜ್ಯದಲ್ಲಿ ಇವತ್ತಿನವರೆಗೂ ಬಿಜೆಪಿ
ಸ್ವಂತ ಬಲದಿಂದ ಅಧಿಕಾರಿಕ್ಕೆ ಬಂದೇ ಇಲ್ಲ, ಹಿಂಬಾಗಿಲಲ್ಲಿ ಬಂದಿದೆ ಅಷ್ಟೆ. ಬಿಜೆಪಿಯಿಂದ ಯಡಿಯೂರಪ್ಪ, ಬೊಮ್ಮಾಯಿ, ಶೆಟ್ಟರ್, ಸದಾನಂದ ಗೌಡ ಮುಖ್ಯಮಂತ್ರಿ ಆದರು. ಇವರೆಲ್ಲಾ ಸ್ಪಷ್ಟ ಬಹುಮತ ಪಡೆದು ಮುಖ್ಯಮಂತ್ರಿ ಆದವರಲ್ಲ ಎಂದು ಸಿಎಂ ಚಾಟಿ ಬೀಸಿದರು.

ನಾವು 2013 ರಲ್ಲಿ 2023 ರಲ್ಲಿ ಸ್ಪಷ್ಟ ಬಹುಮತದ ಮೂಲಕ ಅಧಿಕಾರಕ್ಕೆ ಬಂದಿದ್ದೇವೆ ಜನ ನಮ್ಮನ್ನು ತಿರಸ್ಕರಿಸಿ ವಿರೋಧ ಪಕ್ಷದಲ್ಲಿ ಕೂರಿಸಿದಾಗಲೂ ಜನರ ತೀರ್ಮಾನವನ್ನು ಒಪ್ಪಿಕೊಂಡು ರಚನಾತ್ಮಕ ವಿರೋಧ ಪಕ್ಷವಾಗಿ ಕೆಲಸ ಮಾಡಿ ಮತ್ತೆ ಅಧಿಕಾರಕ್ಕೆ ಬಂದಿದ್ದೇವೆ ನಾವು ಸುಳ್ಳುಗಳ ಆಸರೆಗೆ ಹೋಗಲಿಲ್ಲ ಎಂದು ಹೇಳಿದರು.

ರಾಜ್ಯಪಾಲರ ಭಾಷಣ ಮತ್ತು ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಕೂಲ ಕುರಿತಂತೆ ರಾಜ್ಯ ಮಟ್ಟದ ಕನ್ನಡ ಮತ್ತು ಇಂಗ್ಲಿಷ್ ಪತ್ರಿಕೆಗಳು ಹಾಗೂ ಇತರೆ ಮಾಧ್ಯಮಗಳು ಶ್ಲಾಘಿಸಿ ಬರೆದಿರುವುದನ್ನು ಇದೇ ವೇಳೆ ಸಿಎಂ ಪ್ರಸ್ತಾಪಿಸಿದರು.

ವಿರೋಧ ಪಕ್ಷಗಳು ನಾಡಿನ ಪತ್ರಿಕೆಗಳ ಅಭಿಪ್ರಾಯ ಮತ್ತು ವಿಶ್ಲೇಷಣೆಗಳನ್ನಾದರೂ ಓದುವುದನ್ನು ರೂಢಿಸಿಕೊಳ್ಳಬೇಕು, ಏನನ್ನೂ ತಿಳಿದುಕೊಳ್ಳದೆ ಸುಳ್ಳುಗಳನ್ನು ಹೇಳಬಾರದು ಎಂದು ಸಿದ್ದರಾಮಯ್ಯ ಸಲಹೆ ನೀಡಿದರು.


Share this with Friends

Related Post