Sat. Apr 19th, 2025

ಉತ್ತರ ಪ್ರದೇಶ: ರಾಹುಲ್ ಗಾಂಧಿಗೆ ಜಾಮೀನು ಮಂಜೂರು

Share this with Friends

ಉತ್ತರ ಪ್ರದೇಶ,ಫೆ.20: ಮಾನನಷ್ಟ ಮೊಕದ್ದಮೆ ಪ್ರಕರಣ ಸಂಬಂಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಯುಪಿಯ ಸುಲ್ತಾನ್ ಪುರ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು ಸಧ್ಯಕ್ಕೆ ನಿರಾಳರಾಗಿದ್ದಾರೆ

2018ರಲ್ಲಿ ರಾಹುಲ್ ಗಾಂಧಿ ಅವರು ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಗಂಭೀರ ಆರೋಪ ಮಾಡಿದ್ದರು.ಹಾಗಾಗಿ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು

2018ರ ಹಿಂದಿನ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸುಲ್ತಾನ್‌ಪುರದ ವಿಶೇಷ ನ್ಯಾಯಾಲಯ ಮಂಗಳವಾರ ಜಾಮೀನು ನೀಡಿದೆ.

ವಕೀಲ ಸಂತೋಷ್ ಪಾಂಡೆ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿ, ರಾಹುಲ್ ಗಾಂಧಿ ಇಂದು ನ್ಯಾಯಾಲಯಕ್ಕೆ ಶರಣಾದರು ಮತ್ತು ನ್ಯಾಯಾಲಯವು ಅವರನ್ನು 30-45 ನಿಮಿಷಗಳ ಕಾಲ ಕಸ್ಟಡಿಗೆ ತೆಗೆದುಕೊಂಡಿತು ನಂತರ ಅವರಿಗೆ‌ ಜಾಮೀನು ನೀಡಿ ಕಳುಹಿಸಿತು ಎಂದು ಸ್ಪಷ್ಟಪಡಿಸಿದರು.


Share this with Friends

Related Post