Sat. Mar 7th, 2026

ದರ್ಶನ್‌ ಜಾಮೀನು ಅರ್ಜಿ: ಅ.14 ರಂದು ಪ್ರಕಟ

Share this with Friends

ಬೆಂಗಳೂರು: ನಟ ದರ್ಶನ್‌ ಮತ್ತು ಪವಿತ್ರಾ ಗೌಡ ಅವರ ಜಾಮೀನು ಅರ್ಜಿಯ ಭವಿಷ್ಯ ಅ.14 ರಂದು ಗೊತ್ತಾಗಲಿದೆ

ಸುದೀರ್ಘ ವಿಚಾರಣೆ ನಡೆಸಿದ ಸೆಷನ್ಸ್‌ ಕೋರ್ಟ್‌ ನ್ಯಾಯಾಧೀಶರಾದ ಜೈಶಂಕರ್‌ ವಿಚಾರಣೆಯನ್ನು ಮುಕ್ತಾಯಗೊಳಿಸಿ ಅ.14 ರಂದು ಅದೇಶ ಪ್ರಕಟಿಸುವುದಾಗಿ ತಿಳಿಸಿದರು.

ಇಂದು ದರ್ಶನ್‌ ಪರ ಹಿರಿಯ ಕ್ರಿಮಿನಲ್‌ ವಕೀಲ ಸಿ.ವಿ ನಾಗೇಶ್ ವಾದ ಮಂಡಿಸಿದರೆ ಪೊಲೀಸರ ಪರವಾಗಿ ಎಸ್‌ಪಿಪಿ ಪ್ರಸನ್ನ ಕುಮಾರ್ ವಾದಿಸಿದರು.

ಬುಧವಾರ ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸಿದ್ದ ಕೋರ್ಟ್‌ ಅ.14 ರಂದು ಆದೇಶ ಪ್ರಕಟಿಸುವುದಾಗಿ ಹೇಳಿತ್ತು.

ಹಾಗಾಗಿ ದರ್ಶನ್ ಮತ್ತು ಪವಿತ್ರ ಗೌಡ ಇಬ್ಬರ ಜಾಮೀನು ಸೋಮವಾರ ಗೊತ್ತಾಗಲಿದೆ.


Share this with Friends

Related Post