ಮೈಸೂರು: ಲೋಕಾಯುಕ್ತ ಪೊಲೀಸರು ಮುಡಾ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದು ಪ್ರಕರಣದ ಎ 3 ಹಾಗೂ ಎ 4 ಆರೋಪಿಗಳು ವಿಚಾರಣೆಗೆ ಎದುರಿಸಿದರು.
ಲೋಕಾಯುಕ್ತ ಅಧಿಕಾರಿಗಳು ಮುಡಾ ಪ್ರಕರಣದ ಎ3 ಆರೋಪಿ ಮಲ್ಲಿಕಾರ್ಜುನ ಹಾಗೂ ಎ4 ಆರೋಪಿ ದೇವರಾಜು ಅವರಿಗೆ ನೋಟಿಸ್ ನೀಡಿ ಅ. ೧೦ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು.
ಅದರಂತೆ ಗುರುವಾರ ಮಲ್ಲಿಕಾರ್ಜುನ ಮತ್ತು ದೇವರಾಜು ನಗರದಲ್ಲಿರುವ ಲೋಕಾಯುಕ್ತ ಕಚೇರಿಗೆ ಆಗಮಿಸಿ ವಿಚಾರಣೆ ಎದುರಿಸಿದರು.
ಸತತ ಎಂಟು ಗಂಟೆಗಳ ಕಾಲ ಈ ಇಬ್ಬರು ವಿಚಾರಣೆ ಎದುರಿಸಿದರು.
ಈಗಾಗಲೇ ಲೋಕಾಯುಕ್ತ ಅಧಿಕಾರಿಗಳು ದೂರುದಾರ ಸ್ನೇಹಮಯಿ ಕೃಷ್ಣ ಅವರ ವಿಚಾರಣೆಯನ್ನು ನಡೆಸಿದ್ದಾರೆ.
ಮೈಸೂರಿನ ಕೆಸರೆ ಗ್ರಾಮಕ್ಕೆ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದ್ದರು.