Mon. Dec 23rd, 2024

ಯೋಗೀಶ್ವರ್ 50 ಸಾವಿರ ಮತಗಳ ಅಂತರದಲ್ಲಿ ಗೆಲ್ಲಲಿ:ಸಿದ್ದು

Share this with Friends

ಚನ್ನಪಟ್ಟಣ: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಕನಿಷ್ಠ 50 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಯೋಗೀಶ್ವರ್ ಜಯ ಗಳಿಸಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಆಶಿಸಿದರು.

ಯೋಗೀಶ್ವರ್ ಪರ ರೋಡ್ ಶೋ ನಲ್ಲಿ‌ ಭಾಗವಹಿಸಿ ಮಾತನಾಡಿದ ಸಿಎಂ,
ಕೆರೆಗಳಿಗೆ ಜೀವದಾನ ಮಾಡಿದ ಯೋಗೀಶ್ವರ್ ಅಭಿವೃದ್ಧಿ ಪರವಾಗಿ ಇರುವುದರಿಂದಲೇ ಐದು ಬಾರಿ ಶಾಸಕರಾಗಿದ್ದು ಕಾಂಗ್ರೆಸ್ಸಿಗೆ ಮರಳಿದ್ದಾರೆ,ಅವರನ್ನು ಗೆಲ್ಲಿಸುವ ಮೂಲಕ‌ ಚನ್ನಪಟ್ಟಣದಲ್ಲಿ ನಿಂತು ಹೋಗಿರುವ ಅಭಿವೃದ್ಧಿಗೆ ಮರು ಚಾಲನೆ ನೀಡಿ ಎಂದು ಕರೆ ನೀಡಿದರು.

ಕುಮಾರಸ್ವಾಮಿ ಅವರಿಗೆ ಚನ್ನಪಟ್ಟಣ ಮರೆತುಹೋಗಿ ಮಂಡ್ಯಕ್ಕೆ ಸೀಮಿತರಾಗಿದ್ದಾರೆ. ಬಿಜೆಪಿ ಒಕ್ಕೂಟದಿಂದ ಕುಮಾರಸ್ವಾಮಿಯೇ ನಿಲ್ಲಲಿ, ನಿಖಿಲ್ ಕುಮಾರಸ್ವಾಮಿಯೇ ನಿಲ್ಲಲಿ, ಶ್ರೀಮತಿ ಅನಿತಾ ಕುಮಾರಸ್ವಾಮಿಯವರೇ ನಿಲ್ಲಲಿ ಇಲ್ಲಿ ಕಾಂಗ್ರೆಸ್ ಪಕ್ಷದ ಯೋಗೀಶ್ವರ್ ಅವರೇ ಭರ್ಜರಿ ಜಯಗಳಿಸುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಮ್ಮದು ಜನಕಲ್ಯಾಣದ ಸರ್ಕಾರ,ಈ ಸರ್ಕಾರದಲ್ಲಿ ಯೋಗೀಶ್ವರ್ ಇರಬೇಕು ಹೆಚ್.ಡಿ.ಕುಮಾರಸ್ವಾಮಿಯವರು ಮಾಡದ ಅಭಿವೃದ್ಧಿ ಕೆಲಸಗಳು ಮುಂದಿನ ತಿಂಗಳಿನಿಂದ ಶಾಸಕರಾಗಿ ಯೋಗೀಶ್ವರ್ ಮುಂದುವರೆಸುತ್ತಾರೆ, ನಾನು ಮತ್ತೆ ಚನ್ನಪಟ್ಟಣಕ್ಕೆ ಪ್ರಚಾರಕ್ಕೆ ಬರುತ್ತೇನೆ ಎಂದು ಸಿದ್ದು ತಿಳಿಸಿದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರುಗಳಾದ ಬೈರತಿ ಸುರೇಶ್, ಎಂ.ಸಿ.ಸುಧಾಕರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ.ರೇವಣ್ಣ,ಮಾಜಿ ಸಂಸದ ಡಿ.ಕೆ.ಸುರೇಶ್ ಮತ್ತಿತರರು ಹಾಜರಿದ್ದರು.


Share this with Friends

Related Post