Mon. Dec 23rd, 2024

ಬೆಲೆಕೇರಿ ಅದಿರು ಅಕ್ರಮ ಸಾಗಾಟ :ಸತೀಶ್ ಸೈಲ್ ಗೆ 7 ವರ್ಷ ಜೈಲು

Share this with Friends

ಬೆಂಗಳೂರು: ಬೆಲೆಕೇರಿ ಅದಿರು ಅಕ್ರಮ ಸಾಗಾಟ ಪ್ರಕರಣ ಸಂಬಂಧ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಏಳು ವರ್ಷ ಜೈಲು ಶಿಕ್ಷೆಯನ್ನು ವಿಧಿಸಿದೆ.

ನ್ಯಾ.ಗಜಾನನ ಭಟ್ ಅವರು ಈ ಶಿಕ್ಷೆಯ ಆದೇಶವನ್ನು ಪ್ರಕಟಿಸಿದರು. ಒಟ್ಟು ಮೂರು ಪ್ರಕರಣಗಳಲ್ಲಿ ಶಿಕ್ಷೆಯನ್ನು ವಿಧಿಸಲಾಗಿದೆ.

ಸತೀಶ್ ಸೈಲ್ ಗೆ ನ್ಯಾಯಾಲಯ ಒಟ್ಟು 4 ಪ್ರಕರಣದಲ್ಲಿ ಶಿಕ್ಷೆ ಪ್ರಕಟ ಮಾಡಿದೆ.
420 ವಂಚನೆ ಪ್ರಕರಣದಲ್ಲಿ 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ಅದಿರು ಕಳ್ಳತನ ಪ್ರಕರಣದಲ್ಲಿ 3 ವರ್ಷ ಹಾಗೂ ಒಳಸಂಚು ಪ್ರಕರಣದಲ್ಲಿ 5 ವರ್ಷ ಶಿಕ್ಷೆಯನ್ನು ವಿಧಿಸಲಾಗಿದೆ.ಅಲ್ಲದೆ, 9 ಕೋಟಿ 60 ಲಕ್ಷ ರೂಪಾಯಿ ದಂಡ ಪಾವತಿ ಮಾಡುವಂತೆ ಆದೇಶ ಮಾಡಿದೆ.

ಸತೀಶ್ ಸೈಲ್‌ ವಿರುದ್ಧ ಬೆಲೆಕೇರಿ ಅದಿರು ಅಕ್ರಮ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 6 ಪ್ರಕರಣ ದಾಖಲಾಗಿತ್ತು.

ಸುದೀರ್ಘ 14 ವರ್ಷಗಳ ವಿಚಾರಣೆಯ ಬಳಿಕ ಶಾಸಕ ಸತೀಶ್ ಸೈಲ್ ಹಾಗೂ ಇತರ ಆರೋಪಿಗಳನ್ನು ಜನಪ್ರತಿನಿಧಿಗಳ ನ್ಯಾಯಾಲಯ ತಪ್ಪಿತಸ್ಥರೆಂದು ಘೋಷಿಸಿತ್ತು.ಇಂದು ಶಿಕ್ಷೆ ಪ್ರಮಾಣವನ್ನು ನ್ಯಾಯಾಲಯ ಘೋಷಣೆ ಮಾಡಿದೆ.

ಈ ಪ್ರಕರಣದಲ್ಲಿ ಶಾಸಕ ಸತೀಶ್ ಸೈಲ್, ಮಹೇಶ್ ಬಿಳಿಯೆ, ಕಾರಾಪುಡಿ ಮಹೇಶ್, ಸ್ವಸ್ತಿಕ್ ನಾಗರಾಜು ಸೇರಿದಂತೆ ಹಲವರ ವಿರುದ್ಧ ಆರೋಪಪಟ್ಟಿಯನ್ನು ಸಿಬಿಐ ದಾಖಲಿಸಿತ್ತು.


Share this with Friends

Related Post