Mon. Dec 23rd, 2024

ಮರಣದ ನಂತರವೂ ಅಪ್ಪು ಜೀವಿತ: ನಾರಾಯಣಗೌಡ

Share this with Friends

ಮೈಸೂರು: ಮರಣದ ನಂತರವೂ ಜನರ ಮನದಲ್ಲಿ ಹಸಿರಾಗಿರಬೇಕು, ಅಂತಹ ಬದುಕು ಪುನೀತ್‌ ರಾಜ್‌ಕುಮಾರ್‌ ಅವರದು ಎಂದು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ. ನಾರಾಯಣ ಗೌಡ ಹೇಳಿದರು.

ಮಾದೇಶ್ವರ ಸೇವಾ ಸಂಸ್ಥೆ ವತಿಯಿಂದ
ವಿಜಯನಗರದ ಖಾಸಗಿ ಹೋಟೆಲ್ ನಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಮೂರನೇ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ಹಮ್ಮಿಕೊಂಡಿದ್ದ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.

ಶ್ರೀಮಂತಿಕೆ, ಜೀವಿತಾವಧಿ ಮುಖ್ಯವಲ್ಲ, ಹೇಗೆ ಬದುಕಿದ್ದರು ಎಂಬುದೇ ಮುಖ್ಯ,ಕೇವಲ 46 ವರ್ಷ ಬದುಕಿದರೂ ಪುನೀತ್ ಸಾವಿರಾರು ಜನರಿಗೆ ಆಸರೆಯಾಗಿದ್ದರು. ಅನೇಕ ವೃದ್ಧಾಶ್ರಮ, ಅನಾಥಾಶ್ರಮಗಳಿಗೆ ಧನ ಸಹಾಯ ಮಾಡಿದ್ದರು. ಪ್ರಚಾರ ಬಯಸದೇ ಕೊಡುಗೈ ದಾನಿಯಾಗಿದ್ದರು ಎಂದು ನುಡಿದರು.

ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ ಪ್ರಕಾಶ್ ಮಾತನಾಡಿ
ಪುನೀತ್ ರಾಜಕುಮಾರ್ ಅದ್ಭುತ ನಟ. ಬಾಲ್ಯದಿಂದಲೇ ನಟನೆ ಯಲ್ಲಿ ತೊಡಗಿಕೊಂಡಿದ್ದ ಅವರ ಅಕಾಲಿಕ ನಿಧನದಿಂದ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ಅಂತಹ ಅಭಿಮಾನದ ವಿದಾಯ ಎಲ್ಲರಿಗೂ ಸಿಗುವುದಿಲ್ಲ ಎಂದು ಹೇಳಿದರು.

ಹಿರಿಯ ಸಮಾಜ ಸೇವಕರಾದ ಕೆ ರಘುರಾಮ್ ವಾಜಪೇಯಿ ಮಾತನಾಡಿ
ಪುನೀತ್ ಸಮಾಜ ಸೇವೆಯಲ್ಲೂ ತೊಡಗಿದ್ದರು. ಅವರ ಅಭಿಮಾನಿಗಳು ಕೂಡಾ ಅವರಂತೆ ಒಳ್ಳೆಯ ಕೆಲಸ ಮಾಡುವ ಸಂಕಲ್ಪ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ಕರ್ನಾಟಕ ವಾಣಿಜ್ಯ ಮಂಡಳಿ ಅಧ್ಯಕ್ಷ ಕೆ ಬಿ ಲಿಂಗರಾಜು ಮಾತನಾಡಿ, ಅಪ್ಪುನಟರಾಗಿ ಮಾತ್ರವಲ್ಲದೆ ಮಾನವೀಯ ಕೆಲಸಗಳನ್ನು ಮಾಡುವ ಮೂಲಕ ಕನ್ನಡಿಗರ ಮೆಚ್ಚುಗೆ ಪಡೆದಿದ್ದರು. ಅವರು ಅಭಿಮಾನಿಗಳಿಗೆ ಆರಾಧ್ಯ ದೈವವೂ ಆಗಿದ್ದಾರೆ. ಅವರು ಇಲ್ಲದಿದ್ದರೂ ಅವರು ಮಾಡಿರುವ ಸಮಾಜಮುಖಿ ಕೆಲಸ ಇಂದಿಗೂ ಜೀವಂತಾಗಿದೆ ಎಂದು ಸ್ಮರಿಸಿದರು.

ಸಂಗೀತ ಹಾಗೂ ವೈದ್ಯಕೀಯ ಕ್ಷೇತ್ರದಿಂದ ಡಾಕ್ಟರ್ ರೇಖಾ ಮನಃಶಾಂತಿ, ನಿರೂಪಣೆ ಕ್ಷೇತ್ರ ಮಂಜು ಸಿ ಶಂಕರ್, ಸಹಕಾರಿ ಕ್ಷೇತ್ರ ರಿಷಿ ವಿಶ್ವಕರ್ಮ, ಸಂಘಟನಾ ಕ್ಷೇತ್ರ ರೂಪ ಎಚ್ ಗೌಡ, ಕ್ರೀಡಾ ಕ್ಷೇತ್ರ ಅಲೋಕ್ ಆರ್ ಜೈನ್, ಚಿತ್ರರಂಗ ಕ್ಷೇತ್ರ ಸ್ಮಿತಾ ಬಿ, ಸಂಘಟನಾ ಕ್ಷೇತ್ರ ಕಾಡನಹಳ್ಳಿ ಡಿ. ಸ್ವಾಮಿಗೌಡ ರವರಿಗೆ ಡಾ. ಪುನೀತ್ ರಾಜರತ್ನ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಯಿತು.

ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಸಮಾಜ ಸೇವಕರಾದ ನಜರ್ಬಾದ್ ನಟರಾಜ್, ಮಯೂರ ಕನ್ನಡ ಯುವಕರ ಬಳಗದ ಅಧ್ಯಕ್ಷರಾದ ಜಿ ರಾಘವೇಂದ್ರ, ಮಲೆ ಮಾದೇಶ್ವರ ಸೇವಾ ಸಂಸ್ಥೆ ಸಂಸ್ಥೆಯ ಅಧ್ಯಕ್ಷರಾದ ಮಹಾನ್ ಶ್ರೇಯಸ್, ರಾಕೇಶ್ ಮತ್ತಿತರರು ಪಾಲ್ಗೊಂಡಿದ್ದರು.


Share this with Friends

Related Post