Mon. Dec 23rd, 2024

ತೇಜೇಶ್ ಗೆ ರಾಜ್ಯೋತ್ಸವ ಪ್ರಶಸ್ತಿ

Share this with Friends

ಮೈಸೂರು: ಕರ್ನಾಟಕ ಸೇನಾ ಪಡೆ ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ ಗೌಡ ಅವರು ಈ‌ ಸಾಲಿನ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಗೆ ಭಾಜನನಾಗಿದ್ದಾರೆ.

ತೇಜೇಶ್ ಲೋಕೇಶ್ ಗೌಡ ಅವರು ಕಳೆದ 15 ವರ್ಷಗಳಿಂದ ಕರ್ನಾಟಕ ಸೇನಾ ಪಡೆಯ ಜಿಲ್ಲಾಧ್ಯಕ್ಷರಾಗಿ ನಾಡಿನ ನೆಲ ಜಲ ಭಾಷೆ ಗಳ ವಿಷಯ ಬಂದಾಗಲೆಲ್ಲಾ ಸತತ ಹೋರಾಟ ಮಾಡಿಕೊಂಡು ಬಂದಿದ್ದಾರೆ.

ಅವರನ್ನು ಕನ್ನಡ ಹೋರಾಟ ಕ್ಷೇತ್ರದಿಂದ
ಈ ಸಾಲಿನ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಗೆ ಆಯ್ಕೆ ಮಾಡಲಾಗಿದ್ದು,ತಮ್ಮನ್ನು ಆಯ್ಕೆ ಮಾಡಲು ಸಹಕರಿಸಿದ ಎಲ್ಲರಿಗೂ ತೇಜೇಶ್ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.


Share this with Friends

Related Post