Mon. Dec 23rd, 2024

ಎಚ್.ಡಿ. ಕೋಟೆಯಲ್ಲಿ ಹುಲಿ ಪ್ರತ್ಯಕ್ಷ: ಆತಂಕದಲ್ಲಿ ಜನತೆ

Share this with Friends

ಎಚ್.ಡಿ. ಕೋಟೆ: ಪಟ್ಟಣದ ಹೆಬ್ಬಳ್ಳ, ಸ್ಟೇಡಿಯಂ ಬಡಾವಣೆ ಹಿಂಭಾಗ ಹುಲಿ ಪ್ರತ್ಯಕ್ಷವಾಗಿದ್ದು ಗ್ರಾಮಸ್ಥರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದಾರೆ.

ನಾಗಮ್ಮ ಬಸವರಾಜು ಅವರ ಜಮೀನಿನಲ್ಲಿ ಜಮೀನು ನೋಡಿಕೊಳ್ಳುವ ಚಂದ್ರು ಅವರ ಮೇಲೆ ಹುಲಿ ದಾಳಿ ಮಾಡಲು ಮುಂದಾದರೂ ತಂತಿ ಬೇಲಿ ಇದ್ದುದರಿಂದ ಹುಲಿ ದಾಳಿಯಿಂದ ಅವರು ಬಚಾವಾಗಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಎರಡು ಆನೆಗಳ ಮೂಲಕ ಕಾರ್ಯಾಚರಣೆ ಆರಂಭಿಸಲಾಗಿದೆ. ದಸರಾ ಆನೆಗಳಾದ ಬಳ್ಳೆ ಆನೆ ಶಿಬಿರಕ್ಕೆ ನೂತನವಾಗಿ ಬಂದಿರುವ ಮಹೇಂದ್ರ ಮತ್ತು ಭೀಮ ಆನೆಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿವೆ.50 ಕ್ಕೂ ಹೆಚ್ಚಿನ ಅರಣ್ಯ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಹೆಬ್ಬಳ್ಳ ಸಮೀಪದ ದಯಾನಂದ ಅವರ ಜಮೀನಿನ ಸಮೀಪ ಹುಲಿ ಕಂಡು ತಕ್ಷಣ ವಿಡಿಯೋವನ್ನು ಮಾಡಿ ಅರಣ್ಯ ಇಲಾಖೆಗೆ ಕಳುಹಿಸಿದ್ದಾರೆ.

ನಂತರ ಟೈಗರ್ ಬ್ಲಾಕ್ ನಲ್ಲಿ ಕಾರ್ಯಾಚರಣೆ ಮಾಡುತ್ತಿದ್ದ ಆನೆಯನ್ನು ಹೆಬ್ಬಳ್ಳಕ್ಕೆ ಕರೆಸಿಕೊಂಡು ಎರಡು ಆನೆಗಳು ನುರಿತ ವೈದ್ಯರು ಹಾಗೂ ನುರಿತ ಅರವಳಿಕೆ ತಜ್ಞರ ಮೂಲಕ ಕಾರ್ಯಾಚರಣೆ ಆರಂಭಿಸಿದ್ದಾರೆ.

ಆನೆಗಳ ಮೂಲಕ ಕಾರ್ಯಾಚರಣೆ ಆರಂಭವಾದ ಒಂದು ಗಂಟೆಯ ಬಳಿಕ ಹುಲಿ ಕಾಣಿಸಿಕೊಂಡಿದೆ.ಆದರೆ ಹುಲಿ ದೂರವಿದ್ದ ಕಾರಣ ಅರವಳಿಕೆ ನೀಡಲು ಸಾಧ್ಯವಾಗಿಲ್ಲ.

ಹುಲಿಯ ಹೆಜ್ಜೆಯ ಜಾಡನ್ನಿಡಿದು ಕಾರ್ಯಾಚರಣೆ ಮುಂದುವರಿದಿದೆ.

ಸುದ್ದಿ ಹರಡುತ್ತಿದ್ದಂತೆ, ಸ್ಥಳಕ್ಕೆ ನೂರಾರು ಮಂದಿ ಜಮಾಯಿಸಿದ್ದರು. ಇದರಿಂದ ಜಮೀನುಗಳಲ್ಲಿ ಹಿಂಗಾರು ಬೆಳೆಗೆ ಬಿತ್ತನೆ ಮಾಡಿದ್ದ ರಾಗಿ, ಜೋಳ ಮತ್ತು ಭತ್ತದ ಫಸಲು ಹಾನಿಯಾಗಿದೆ.


Share this with Friends

Related Post