Sat. Apr 19th, 2025

ಎಡವಟ್ಟು ಮಾಡೋದು ನಂತರ ಸುಳ್ಳು ಹೇಳೋದು ಸಿಎಂ ದಿನಚರಿ:ಅಶೋಕ್

Share this with Friends

ಬೆಂಗಳೂರು: ಮುಖ್ಯಮಂತ್ರಿಗಳೇ, ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಪ್ರಸ್ತಾವನೆಯೇ ಸರ್ಕಾರದ ಮುಂದಿಲ್ಲ ಎಂದು ಸತ್ಯದ ತಲೆಯ ಮೇಲೆ ಹೊಡೆದ ಹಾಗೆ ಸುಳ್ಳು ಹೇಳುತ್ತೀರಲ್ಲಾ, ತಮ್ಮ ಭಂಡತನಕ್ಕೆ ಏನು ಹೇಳೋಣ ಎಂದು ಪ್ರತಿಪಕ್ಷ ನಾಯಕ ಅಶೋಕ್ ಪ್ರಶ್ನಿಸಿದ್ದಾರೆ.

ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಶೇ.4 ಮೀಸಲಾತಿ ಕೊಡಬೇಕು ಎಂದು ತಮ್ಮ ರಾಜಕೀಯ ಕಾರ್ಯದರ್ಶಿ ನಾಸೀರ್ ಅಹ್ಮದ್, ಸಚಿವ ಜಮೀರ್ ಅಹ್ಮದ್ ಖಾನ್ ಸೇರಿದಂತೆ ಮುಸ್ಲಿಂ ಶಾಸಕರು ಆಗಸ್ಟ್ 24 ರಂದು ತಮಗೆ ಪತ್ರ ಬರೆದಿದ್ದಾರೆ. ತಾವು ಅದೇ ದಿನವೇ ಈ ಪತ್ರವನ್ನ ಪರಿಶೀಲಿಸಿ ಮಂಡಿಸಿ ಎಂದು ಆರ್ಥಿಕ ಇಲಾಖೆಗೆ ನಿರ್ದೇಶನ ನೀಡಿದ್ದೀರಿ. ಈ ಸಂಬಂಧ ಕೆಟಿಪಿಪಿ ಕಾಯ್ದೆಗೆ ತಿದ್ದುಪಡಿ ತರಲೂ ಸಹ ತಾವು ಅನುಮೋದನೆ ನೀಡಿದ್ದೀರಿ.

ಇಷ್ಟೆಲ್ಲಾ ಪತ್ರ ವ್ಯವಹಾರ ನಡೆದಿದ್ದರೂ ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಪ್ರಸ್ತಾವನೆಯೇ ಸರ್ಕಾರದ ಮುಂದಿಲ್ಲ ಎಂದು ಹಸಿ ಸುಳ್ಳು ಹೇಳುತ್ತಿರಲ್ಲ, ತಮಗೆ ಕಿಂಚಿತ್ತಾದರೂ ಆತ್ಮಸಾಕ್ಷಿ, ನೈತಿಕತೆ ಅನ್ನುವುದೇ ಇಲ್ಲವೇ ಎಂದು ಅಶೋಕ್ ಟ್ವೀಟ್ ಮಾಡಿ ಪ್ರಶ್ನಿಸಿದ್ದಾರೆ.

ಸತ್ಯದ ಮೇಲೆ ಪ್ರಮಾಣ ವಚನ ಸ್ವೀಕರಿಸಿ, ಬಾಯಿ ಬಿಟ್ಟರೆ ಬರಿ ಸುಳ್ಳು ಹೇಳುವ ತಮ್ಮನ್ನ ಆ ತಾಯಿ ಚಾಮುಂಡೇಶ್ವರಿ ಮೆಚ್ಚುತ್ತಾಳಾ, ತಮ್ಮನ್ನ ನಂಬಿ ಮತ ಹಾಕಿ ಅಧಿಕಾರ ಕೊಟ್ಟ ಕನ್ನಡಿಗರು ಕ್ಷಮಿಸುತ್ತಾರಾ ಎಂದು ಕೇಳಿದ್ದಾರೆ.


Share this with Friends

Related Post