Mon. Dec 23rd, 2024

ಮೈಸೂರು ಪಾಲಿಕೆ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

Share this with Friends

ಮೈಸೂರು: ಮೈಸೂರು ನಗರ ಪಾಲಿಕೆ ವಲಯ ಆಯುಕ್ತ ನಾಗೇಶ್ ಸೇರಿದಂತೆ ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿರುವ ಮೈಸೂರು ಪಾಲಿಕೆ ವಲಯ ಆಯುಕ್ತ ನಾಗೇಶ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ.

ಈ ಹಿಂದೆ ನಾಗೇಶ್ ಅವರು
ಚನ್ನಪಟ್ಟಣ ನಗರಸಭೆ ಪೌರಾಯುಕ್ತರಾಗಿ ಕರ್ತವ್ಯ ನಿರ್ವಹಿಸಿದ್ದರು.

ಶ್ರೀರಂಗಪಟ್ಟಣ ಹಾಗೂ ಶಿವಮೊಗ್ಗ ನಿವಾಸಗಳ ಮೇಲು ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ಹಿಂದೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ತಹಶೀಲ್ದಾರ್ ಆಗಿದ್ದ ವೇಳೆ ಡಾಲರ್ಸ್ ಕಾಲೋನಿಯಲ್ಲಿ ನಾಗೇಶ್ ಅಪಾರ್ಟ್ ಮೆಂಟ್ ನಿರ್ಮಿಸಿದ್ದರು.

ಮೈಸೂರು ನಗರ ಮೇಟಗಳ್ಳಿ ಬಸವನಗುಡಿ ವೃತ್ತದ ಬಳಿ ಇರುವ ವಲಯ ಕಚೇರಿ 5 ರ ಮೇಲೂ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಕೆಲವು ದಾಖಲೆಗಳನ್ನ ವಶಪಡಿಸಿಕೊಂಡಿದ್ದಾರೆ.

ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲ್ಲೂಕಿನ ಬೋರಗಾಂವ ಗ್ರಾಮ ಲೆಕ್ಕಾಧಿಕಾರಿ ವಿಠಲ್ ಡವಳೇಶ್ವರ, ಧಾರವಾಡದಲ್ಲಿ ಕೆಐಎಡಿಬಿ ಎಇಇ ಗೋವಿಂದ ಭಜಂತ್ರಿ,
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಅಧಿಕಾರಿ ಕಮಲ ರಾಜ್ ಮನೆ ಮೇಲೂ ಲೋಕಾಯುಕ್ತ ದಾಳಿ ನಡೆದಿದೆ.


Share this with Friends

Related Post