Mon. Dec 23rd, 2024

ಪಂಚಮುಖಿ ಆಟೋ ಯುವಕರ ಬಳಗದಿಂದ ಕನ್ನಡ ರಾಜ್ಯೋತ್ಸವ ಆಚರಣೆ

Share this with Friends

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ‌ ಪುರಸಭೆ ವೃತ್ತದಲ್ಲಿ ಇಂದು ಕನ್ನಡ ರಾಜ್ಯೋತ್ಸವವನ್ನು ಪಂಚಮುಖಿ ಆಟೋ ಯುವಕರ ಬಳಗದ ವತಿಯಿಂದ ಆಚರಿಸಲಾಯಿತು.

ವಿಶೇಷ‌ ಆಹ್ವಾನಿತರಾಗಿದ್ದ
ಶ್ರೀರಂಗಪಟ್ಟಣ ಕ್ಷೇತ್ರದ ಮಾಜಿ ಶಾಸಕಿ ವಿಜಯಲಕ್ಷ್ಮಿ ಬಂಡಿ ಸಿದ್ದೇಗೌಡ ಅವರು ಮಾತನಾಡಿ ನಾಡು, ನುಡಿ, ಸಂಸ್ಕೃತಿ, ನೆಲ, ಜಲದ ವಿಷಯ ಬಂದಾಗ ನಾವು ಯಾವಾಗಲೂ ಒಂದಾಗಿರಬೇಕು ಕರೆ ನೀಡಿದರು.

ನಮ್ಮ ಕನ್ನಡ ನಾಡನ್ನು ಶ್ರೀಗಂಧದ ನಾಡು, ಕರುನಾಡು, ಕನ್ನಡಾಂಭೆಯ ನಾಡು, ತಾಯಿ ಭುವನೇಶ್ವರಿಯ ನಾಡು ಎಂಬೆಲ್ಲ ಹೆಸರುಗಳಿಂದ ಕರೆಯುತ್ತೇವೆ, ಹಚ್ಚಹಸುರಿನ ಸುಂದರ ಬೆಟ್ಟ ಗುಡ್ಡಗಳು ನದಿಗಳು ಹರಿಯುವ, ಸಾಧು-ಸಂತರು-ದಾಸರು- ಶಿವಶರಣರು – ಕವಿಗಳಿಂದ ಕಂಗೊಳಿಸುತ್ತಿರುವ ಕನ್ನಡ ನಾಡು ಎಂಬ ಹೆಸರಿಗೆ ಒಂದು ಧೀಮಂತ ಶಕ್ತಿ ಇದೆ ಎಂದು ಹೇಳಿದರು.

ಪ್ರತಿ ವರ್ಷ ನವೆಂಬರ್ 1 ರಂದು ಎಲ್ಲೆಡೆ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಅಚರಿಸುವುದು ಮತ್ತು ಯುವ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ, ಸಂಸ್ಕೃತ, ಕಲೆ, ಭಾಷೆ ಬಗ್ಗೆ ಅರಿವು ಮೂಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ.


Share this with Friends

Related Post