Mon. Dec 23rd, 2024

ದೇವಸ್ಥಾನ ವ್ಯವಸ್ಥಾಪನಾ ಸಮಿತಿಯಲ್ಲಿ ಅನ್ಯಮತೀಯರ ನೇಮಕ ಮಾಡುವ ವಿಧೇಯಕ ರದ್ದಿಗೆ ಆಗ್ರಹ

Share this with Friends

ಬೆಂಗಳೂರು, ಫೆ.21: ದೇವಸ್ಥಾನ ವ್ಯವಸ್ಥಾಪನಾ ಸಮಿತಿಯಲ್ಲಿ ಅನ್ಯಮತೀಯರನ್ನು ನೇಮಕ ಮಾಡುವ ವಿಧೇಯಕವನ್ನು ರದ್ದು ಮಾಡಬೇಕೆಂಬ ಆಗ್ರಹ ವ್ಯಕ್ತವಾಗಿದೆ.

ಈ‌ ಬಗ್ಗೆ ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ರಾಜ್ಯ ಸಂಯೋಜಕ ಮೋಹನ ಗೌಡ ರಾಜ್ಯ ಸರ್ಕಾರನ್ನು ಒತ್ತಾಯಿಸಿದ್ದಾರೆ.

ರಾಜ್ಯ ಸರಕಾರ 16 ನೇ ವಿಧಾನಸಭೆಯ 3 ನೇ ಅಧಿವೇಶನದಲ್ಲಿ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ (ತಿದ್ದುಪಡಿ) ವಿಧೇಯಕ, 2024 ಕರ್ನಾಟಕ ರಾಜ್ಯ ಪತ್ರಿಕೆಯನ್ನು ಹೊರಡಿಸಿದ್ದು, ಇದರ 25 ನೇ ಕಲಂನಲ್ಲಿ ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಯಲ್ಲಿ ಅನ್ಯ ಸಮುದಾಯದವರನ್ನು ನೇಮಕ ಮಾಡುವ ತಿದ್ದುಪಡಿಯನ್ನು ಮಾಡಲಾಗಿದೆ.

ಈ ಹಿಂದಿನ ತಿದ್ದುಪಡಿಯಲ್ಲಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯಲ್ಲಿ ಹಿಂದೂಗಳನ್ನು ಹೊರತುಪಡಿಸಿ ಬೇರೆ ಯಾವುದೇ ಸಮುದಾಯದವರು ಇರುವಂತಿಲ್ಲ ಎಂಬ ನಿರ್ಣಯವಿತ್ತು.ಆದರೆ ಇದೀಗ ರಾಜ್ಯ ಸರಕಾರ ಇದನ್ನು ಬದಲಾವಣೆ ಮಾಡಿರುವುದು ಸರಿಯಲ್ಲ ಎಂದು ಅವರು ಬೇಸರ‌ ವ್ಯಕ್ತಪಡಿಸಿದ್ದಾರೆ.

ಇದು ದೇವಸ್ಥಾನಗಳಲ್ಲಿ ಹಿಂದೂ ಧರ್ಮದ ಮೇಲೆ ನಂಬಿಕೆ ಇಲ್ಲದವರನ್ನು ಸೇರಿಸಿ ದೇವಸ್ಥಾನಗಳ ಪರಂಪರೆಯನ್ನು ಭಗ್ನ ಮಾಡುವ ಷಡ್ಯಂತ್ರ್ಯವಾಗಿದೆ ಎಂದು ಮೊಹನ್ ಗೌಡ‌ ಆರೋಪಿಸಿದ್ದಾರೆ.

ಹಿಂದೂ ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಗೆ ಅನ್ಯ ಸಮುದಾಯದವರನ್ನು ನೇಮಕ ಮಾಡುವ ಮುಸಲ್ಮಾನರ ಪರವಾಗಿರುವ ರಾಜ್ಯ ಕಾಂಗ್ರೆಸ್ ಸರಕಾರ ಹಿಂದೂಗಳನ್ನು ವಕ್ಸ್ ಬೋರ್ಡಗೆ ನೇಮಕ ಮಾಡುವುದೆ ಎಂದು ಕಾರವಾಗಿ ಪ್ರಶ್ನಿಸಿದ್ದಾರೆ.

ಕೂಡಲೇ ರಾಜ್ಯ ಸರಕಾರ ಈ ತಿದ್ದುಪಡಿಯನ್ನು ರದ್ದು ಮಾಡಬೇಕು ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡುವುದಾಗಿ ಮೋಹನ ಗೌಡ ಎಚ್ಚರಿಸಿದ್ದಾರೆ.


Share this with Friends

Related Post