ಬೆಂಗಳೂರು, ಫೆ,22 : ಯುದ್ಧ ಪೀಡಿತ ಉಕ್ರೇನ್ ಗಡಿಯಲ್ಲಿ ಕಲಬುರಗಿಯ ಮೂವರು ಯುವಕರು ಸಿಕ್ಕಿಬಿದ್ದಿದ್ದು, ನಮ್ಮನ್ನು ಕೂಡಲೇ ರಕ್ಷಿಸಬೇಬೇಕೆಂದು ಮನವಿ ಮಾಡಿದ್ದಾರೆ. ತೆಲಂಗಾಣದ 22 ವರ್ಷದ ಯುವಕ ಮತ್ತು ಕಲಬುರಗಿಯ ಮೂವರು ವ್ಯಾಗ್ನರ್ ಪಡೆಯಲ್ಲಿ ಕೆಲಸ ಮಾಡುತ್ತಿದ್ದು, ರಷ್ಯಾ ಗಡಿಯಲ್ಲಿ ಸಿಲುಕಿದ್ದಾರೆ. ನಮ್ಮನ್ನು ನಕಲಿ ಸೇನಾ ಉದ್ಯೋಗ ದಂಧೆಯಿಂದ ತಕ್ಷಣವೇ ರಕ್ಷಿಸಬೇಕು ಎಂದು ಮನವಿ ಮಾಡಿದ್ದಾರೆ.
ವಿದೇಶದಲ್ಲಿ ಕೆಲಸ ಮಾಡುವ ಆಸೆಯಿಂದ ಏಜೆಂಟ್ ಮೂಲಕ ರಷ್ಯಾಗೆ ತೆರಳಿದ ಕಲಬುರಗಿ ಮೂಲದ ಮೂರು ಯುವಕರನ್ನು ಅಲ್ಲಿ ಯುದ್ಧಕ್ಕೆ ಬಳಕೆ ಮಾಡಿರುವ ಬಗ್ಗೆ ತಿಳಿದು ಬಂದಿದೆ.ಉದ್ಯೋಗದ ಹೆಸರಿನಲ್ಲಿ ಕರೆಸಿಕೊಂಡು ನಮ್ಮ ರಾಜ್ಯದ ಕಲಬುರಗಿ ಜಿಲ್ಲೆಯ ಯುವಕರನ್ನು ರಷ್ಯಾದಲ್ಲಿ ಯುದ್ಧಕ್ಕೆ ಬಳಕೆ ಮಾಡಿಕೊಳ್ಳುತ್ತಿರುವುದು ಬೆಳಕಿಗೆ ಬಂದಿದೆ.
ಈ ಕುರಿತು ಮಾತನಾಡಿರುವ ಗ್ರಾಮೀಣಾಭಿವೃದ್ದಿ ಸಚಿವ ಪ್ರಿಯಾಂಕ್ ಖರ್ಗೆ, ನಮ್ಮ ಜಿಲ್ಲಾಧಿಕಾರಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಕಲಬುರಗಿ ಜಿಲ್ಲೆಯ ಮೂವರು ಯುವಕರು ರಷ್ಯಾಕ್ಕೆ ಹೋಗಿದ್ದ ಮಾಹಿತಿ ಇದೆ. ರಷ್ಯಾ ಸೇನೆ ಅಮಾಯಕ ಯುವಕರನ್ನು ಯುದ್ಧಕ್ಕೆ ಬಳಸಿದ ಮಾಹಿತಿ ಇದೆ. ರಷ್ಯಾದಲ್ಲಿ ನಮ್ಮ ಯುವಕರನ್ನು ಸೇನೆಗೆ ಬಳಸಿಕೊಂಡ ಮಾಹಿತಿ ನಮ್ಮ ಜಿಲ್ಲಾಧಿಕಾರಿ ನೀಡಿದ್ದಾರೆ. ಕರ್ನಾಟಕ ಮಾತ್ರವಲ್ಲದೆ, ತೆಲಂಗಾಣ, ಉತ್ತರಭಾರತದ ಯುವಕರು ಸಿಲುಕಿರುವ ಮಾಹಿತಿ ಇದೆ. ಈ ವಿಚಾರವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗಮನಕ್ಕೆ ತಂದಿದ್ದು, ವಿದೇಶಾಂಗ ಸಚಿವರ ಜೊತೆ ಮಾತನಾಡುವಂತೆ ಮನವಿ ಮಾಡಿದ್ದೇನೆ ಎಂದು ತಿಳಿಸಿದರು.
ಸಲಿಂಗ ಸಂಬಂಧ ಮುಚ್ಚಿಡಲು ತನ್ನದೇ ಕಂದನ ಕೊಂದ ಪಾಪಿ ತಾಯಿ