Mon. Dec 23rd, 2024

ಪ್ರವಾಸಕ್ಕೆ ಬಂದಿದ್ದ ಬಸ್ ಉರುಳಿ ಹಲವು ಮಕ್ಕಳಿಗೆ ಗಾಯ

Share this with Friends

ಮೈಸೂರು: ಪ್ರವಾಸಕ್ಕೆ ಶಾಲಾ ಮಕ್ಕಳನ್ನು ಕರೆತಂದಿದ್ದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಉರುಳಿ ಹತ್ತಕ್ಕೂ ಹೆಚ್ಚು ಮಕ್ಕಳು ಗಾಯಗೊಂಡ ಘಟನೆ ಮೈಸೂರಿನಲ್ಲಿ ನಡೆದಿದೆ.

ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದ್ದು,ಚಾಲಕನ ಅಜಾಗರೂಕತೆಯಿಂದ ಡಿವೈಡರ್​ಗೆ ಡಿಕ್ಕಿಯಾಗಿ ಬಸ್ ಉರುಳಿ ಬಿದ್ದಿದೆ.

ಬಸ್​​ನಲ್ಲಿ 36 ಮಕ್ಕಳು ಪ್ರವಾಸಕ್ಕೆ ಬಂದಿದ್ದರು,ಅವರಲ್ಲಿ 11 ಮಕ್ಕಳು ಗಾಯಗೊಂಡಿದ್ದಾರೆ,ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೈಸೂರು ಪೊಲೀಸ್​ ಕಮಿಷನರ್‌ ಸೀಮಾ ಲಾಟ್ಕರ್‌ ತಿಳಿಸಿದ್ದಾರೆ.

ಬೆಳಗಾವಿ ಜಿಲ್ಲೆ, ಖಾನಾಪುರದ ಶಾಂತಿನಿಕೇತನ ಶಾಲೆಯ ಮಕ್ಕಳು ಮೈಸೂರಿಗೆ ಪ್ರವಾಸಕ್ಕೆ ಬಂದಿದ್ದರು. ಪ್ರವಾಸಿ ತಾಣಗಳನ್ನು ವೀಕ್ಷಿಸಿ ವಾಪಸ್ ತೆರಳುವಾಗ ಈ ಅವಘಡ ಸಂಭವಿಸಿದೆ.

ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲಿಸಿ, ಗಾಯಗೊಂಡ ಮಕ್ಕಳನ್ನು ಕೆ.ಆರ್.ಆಸ್ಪತ್ರೆ ಮತ್ತು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ, ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಪೋಷಕರು ಭಯಪಡಬಾರದು ಎಂದು ಸೀಮಾ ಲಾಟ್ಕರ್‌ ತಿಳಿಸಿದ್ದಾರೆ.


Share this with Friends

Related Post