ಬೆಂಗಳೂರು.ಫೆ,22 : ನಿರ್ಮಾಪಕ ಉಮಾಪತಿ ಗೌಡ ಹಾಗೂ ನಟ ದರ್ಶನ್ ನಡುವೆ ವಾಕ್ಸಮರ ಇದೀಗ ತಾರಕಕ್ಕೆ ಏರಿದ್ದು ನಟ ದರ್ಶನ್ ಗೆ ಹೆಣ್ಣು ಮಕ್ಕಳಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಒಕ್ಕಲಿಗರ ಗೌಡತಿಯರ ಸಂಘದಿಂದ ದೂರು ದಾಖಲಾಗಿದೆ. ಜಯಶ್ರೀ ಎಂಬುವವರು ಕಾವೇರಿ ಭವನದ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ಕಾವೇರಿ ಭವನದ ಮಹಿಳಾ ಆಯೋಗಕ್ಕೆ ಜಯಶ್ರೀ ಎನ್ನುವರು ದೂರು ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
ಇತ್ತೀಚೆಗೆ ದರ್ಶನ್ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ 25 ವರ್ಷಗಳನ್ನು ಪೂರೈಸಿದ ಬೆನ್ನಲ್ಲೇ ಬೆಳ್ಳಿಪರ್ವ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ವೇದಿಕೆ ಮೇಲೆ ದರ್ಶನ್ ತಮ್ಮ ವೃತ್ತಿ ಬದುಕಿನ ಬಗ್ಗೆ ಮಾತಾಡುವಾಗ ವೈಯಕ್ತಿಕ ವಿಚಾರದ ಬಗ್ಗೆ ಮಾತಾಡಿದ್ದರು.
ಕಷ್ಟಪಟ್ಟಾಗ ಮಾತುಗಳು ಕಹಿಯಾಗಿರುತ್ತೆ. ಅದು ಕೆಲವರಿಗೆ ಹಿಡಿಸಲ್ಲ. ಫ್ಯಾಮಿಲಿ ಸಮಸ್ಯೆಗಳು, ಎಲ್ಲ ಸಮಸ್ಯೆಗಳನ್ನು ಪಕ್ಕಕ್ಕೆ ಇಡುತ್ತೇನೆ. ನನ್ನ ಸೆಲೆಬ್ರಿಟಿಗಳು, ನನ್ನ ಕೆಲಸ ಮುಖ್ಯ, ಬೇರೆಯದಕ್ಕೆ ತಲೆಕೆಡಿಸಿಕೊಳ್ಳಲ್ಲ. ಇವತ್ತು ಇವಳು ಇರ್ತಾಳೆ , ನಾಳೆ ಅವಳು ಇರ್ತಾಳೆ ನಾನ್ಯಾಕೆ ಇವರ ಬಗ್ಗೆ ತಲೆ ಕೆಡಿಸಿಕೊಳ್ಳಲಿ. ನನಗೆ ನನ್ನ ಕೆಲಸ ಅಷ್ಟೆ ಮುಖ್ಯ” ಎಂದು ನಟ ದರ್ಶನ್ ಹೇಳಿದ್ದರು.
ತಗಡು ಹೇಳಿಕೆಗೆ ಒಕ್ಕಲಿಗರ ಸಂಘದಿಂದ ಆಕ್ಷೇಪ :
ನಟ ದರ್ಶನ್ ಅವರು ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಅವರ ಕುರಿತು ಆಡಿದ ತಗಡು ಹೇಳಿಕೆಗೆ ಆಕ್ಷೇಪ ವ್ಯಕ್ತವಾಗಿದೆ. ಈ ಕುರಿತು ಉಮಾಪತಿ ಶ್ರೀನಿವಾಸಗೌಡ ಅವರ ಬೆಂಬಲಿಗರು ಅಸಮಾಧಾನ ಹೊರ ಹಾಕಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಲು ರಾಜ್ಯ ಒಕ್ಕಲಿಗರ ಸಂಘ ಮುಂದಾಗಿದೆ. ಹೀಗಾಗಿ ರಾಜ್ಯ ಒಕ್ಕಲಿಗರ ಸಂಘದ ಕೆಂಪೇಗೌಡ ಭವನದ 2ನೇ ಮಹಡಿಯಲ್ಲಿರುವ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಯಲಿದೆ. ಒಕ್ಕಲಿಗರ ಸಂಘದ ನಿರ್ದೇಶಕರು ಮತ್ತು ಸಿನಿಮಾ ನಿರ್ಮಾಪಕರೂ ಆಗಿರುವ ಉಮಾಪತಿ ಶ್ರೀನಿವಾಸ್ ಗೌಡಗೆ ನಟ ದರ್ಶನ್ ಅವರು ಮಾತನಾಡಿದ ರೀತಿ ಸರಿಯಿಲ್ಲ. ಸುಮಾರು ಚಿತ್ರಗಳಿಗೆ ಬಂಡವಾಳ ಹೂಡಿ, ಕಲಾವಿದರಿಗೆ ಪ್ರೋತ್ಸಾಹ ನೀಡುತ್ತಿರುವ ಉಮಾಪತಿ ಅವರಿಗೆ ತಗಡು ಎಂದು ಹೇಳಿದ್ದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.