Sun. Dec 22nd, 2024

87 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ

Share this with Friends

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ 87 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ‌ ದೊರೆಯಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಶುಕ್ರವಾರ ಬೆಳಿಗ್ಗೆ ಚಾಲನೆ ನೀಡಿದರು.

ಕರ್ನಾಟಕದಲ್ಲಿ ಅತಿ ಹೆಚ್ಚು ಕನ್ನಡ ಮಾತನಾಡುವ ಜಿಲ್ಲೆ ಎಂದೇ ಹೆಸರು ಪಡೆದಿರುವ ಹಾಗೂ ಸಕ್ಕರೆ ನಗರಿ ಎಂದು ಪ್ರಸಿದ್ಧವಾಗಿರುವ ಮಂಡ್ಯದಲ್ಲಿ ಆಯೋಜಿಸಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅತ್ಯಂತ ಅಭಿಮಾನದಿಂದ ಹಾಗೂ ಸಂತೋಷದಿಂದ ಉದ್ಘಾಟಿಸಿದ್ದೇನೆ ಎಂದು ಈ ವೇಳೆ ಸಿದ್ದರಾಮಯ್ಯ ನುಡಿದರು.

ಶ್ರೀ ಆದಿ ಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ದಿವ್ಯ ಸಾನಿಧ್ಯ ವಹಿಸಿದ್ದರು.

ಸಮ್ಮೇಳನಾಧ್ಯಕ್ಷರಾದ ನಾಡೋಜ ಡಾ. ಗೊ.ರು.ಚನ್ನಬಸಪ್ಪ, ಹಿರಿಯ ಸಾಹಿತಿಗಳಾದ ಡಾ. ದೊಡ್ಡರಂಗೇಗೌಡ, ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರಾದ ಡಾ ಚಂದ್ರ ಶೇಖರ ಕಂಬಾರ, ವೇದಿಕೆಯ ಮೇಲೆ ಉಪಸ್ಥಿತರಿದ್ದರು.

ಸಚಿವರಾದ ಚೆಲುವರಾಯಸ್ವಾಮಿ,ಡಾ ಹೆ.ಚ್.ಸಿ.ಮಹದೇವಪ್ಪ, ಮುನಿಯಪ್ಪ, ಶಿವರಾಜ್ ತಂಗಡಗಿ, ಕರ್ನಾಟಕ ವಿಧಾನಸಭೆ ಉಪ ಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿ, ಶಾಸಕರಾದ ಪಿ.ಎಂ.ನರೇಂದ್ರ ಸ್ವಾಮಿ, ಪಿ.ರವಿಕುಮಾರ್, ಎಂ.ಬಿ‌.ರಮೇಶ್ ಬಂಡಿ ಸಿದ್ದೇಗೌಡ, ದರ್ಶನ್ ಪುಟ್ಟಣ್ಣಯ್ಯ, ಕೆ.ಎಂ.ಉದಯ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಮಂಡ್ಯದಲ್ಲಿ ನಡೆಯುತ್ತಿರುವ 87 ನೆ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ನಿರೀಕ್ಷೆಗೂ ಮೀರಿ ಜನ ಸಾಗರ ಹರಿದು ಬಂದಿದೆ.

ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿದ ಪ್ರತಿನಿಧಿಗಳಿಗೆ ಅಚ್ಚುಕಟ್ಟಾಗಿ ವ್ಯವಸ್ಥೆಯನ್ನು ಜಿಲ್ಲಾಡಳಿತ ಮಾಡಿದ್ದು, ಸಮ್ಮೇಳನದ ಬಗ್ಗೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದುದು ಕಂಡುಬಂದಿತು.

ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ಪೊಲೀಸ್ ಇಲಾಖೆ ಭಾರೀ ಬಂದೋಬಸ್ತ್ ಮಾಡಿದೆ.


Share this with Friends

Related Post