Mon. Dec 23rd, 2024

ರೈತರ ಪ್ರತಿಭಟನೆ :ಹರಿಯಾಣದಲ್ಲಿ 7 ಜಿಲ್ಲೆಗಳಲ್ಲಿ ಇಂಟರ್ ನೆಟ್ ನಿಷೇಧ

Share this with Friends

ಹರಿಯಾಣ,ಫೆ.22: ರೈತರ ದೆಹಲಿ ಚಲೋ ತೀವ್ರಗೊಂಡ‌ ಬೆನ್ನಲ್ಲೇ ಹರಿಯಾಣ ಸರ್ಕಾರ ರಾಜ್ಯದ ಏಳು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ ನೆಟ್ ನಿಷೇಧ ಮುಂದುವರಿಸಿದೆ.

ಅಂಬಾಲಾ, ಕುರುಕ್ಷೇತ್ರ, ಕೈತಾಲ್, ಜಿಂದ್, ಹಿಸಾರ್, ಫತೇಹಾಬಾದ್ ಮತ್ತು ಸಿರ್ಸಾ ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ ನೆಟ್ ಸೇವೆಗಳು ಸ್ಥಗಿತಗೊಂಡಿದೆ.

ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ನೇತೃತ್ವದಲ್ಲಿ ರೈತರು ದೆಹಲಿ ಚಲೋ ಹಮ್ಮಿಕೊಂಡು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಮತ್ತಿತರ ಬೇಡಿಕೆ ಈಡೇರಿಕೆಗೆ ಒತ್ತಾಯಿಸುತ್ತಿದ್ದಾರೆ.

ಪಂಜಾಬ್ ಮತ್ತು ಹರಿಯಾಣ ನಡುವಿನ ಎರಡು ಗಡಿ ಕೇಂದ್ರಗಳಲ್ಲಿ ಒಂದಾದ ಖನೌರಿ
ಮತ್ತು ಶಂಭುವನ್ನು ಸಾವಿರಾರು ರೈತರು ಆಕ್ರಮಿಸಿಕೊಂಡಿದ್ದು ಬೇಡಿಕೆಗಳನ್ನು ಈಡೇರಿಸುವ ತನಕ ಅಲ್ಲೇ ಮುಷ್ಕರ ಮುಂದುವರಿಸುವುದಾಗಿ ಎಚ್ಚರಿಸಿದ್ದಾರೆ.

ಇದೆಲ್ಲದರ ನಡುವೆ ಇಂದು
ಸಂಯುಕ್ತ ಕಿಸಾನ್ ಮೋರ್ಚಾ (SKM) ಪಂಜಾಬ್ ಮತ್ತು ಹರಿಯಾಣ ನಡುವಿನ ಶಂಭು ಮತ್ತು ಖಾನೌರಿ ಗಡಿ ಬಿಂದುಗಳಲ್ಲಿ ತಮ್ಮ ಸಂಘಟನೆಗಳು ನೀಡಿದ “ದೆಹಲಿ ಚಲೋ” ಕರೆಯ ಭಾಗವಾಗಿ ಸಾವಿರಾರು ರೈತರು ಕ್ಯಾಂಪ್ ಮಾಡುತ್ತಿರುವ ಪರಿಸ್ಥಿತಿಯನ್ನು ಚರ್ಚಿಸಲು ಸಭೆ ನಡೆಸಿದವು.

ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಇತರ ರಾಜ್ಯಗಳಿಂದ ಹಲವಾರು SKM ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಇತ್ತ ಕೇಂದ್ರ ಕೃಷಿ ಸಚಿವ ಅರ್ಜುನ್ ಮುಂಡಾ
ಮಾತನಾಡಿ,ರೈತರೊಂದಿಗೆ ಹಲವು ಸುತ್ತಿನ ಮಾತುಕತೆ ನಡೆದಿದ್ದರೂ ಒಮ್ಮತಕ್ಕೆ ಬರಲು ಎರಡೂ ಕಡೆಯಿಂದ ಹೆಚ್ಚಿನ ಪ್ರಯತ್ನಗಳು ನಡೆಯಬೇಕಿದೆ ಎಂದು ಹೇಳಿದ್ದಾರೆ.

ರೈತರ ಹಿತಾಸಕ್ತಿಗಾಗಿ ಕೆಲಸ ಮಾಡಲು ಕೇಂದ್ರ ಸರ್ಕಾರಕ್ಕೆ ಬದ್ಧತೆ ಇದೆ‌ ಎಂದು ಅವರು ಸ್ಪಷ್ಟಪಡಿಸಿದರು.

ರೈತರೊಂದಿಗೆ ಹಲವಾರು ಸುತ್ತಿನ ಚರ್ಚೆಯಲ್ಲಿ ಅರ್ಥಪೂರ್ಣ ಮಾತುಕತೆಗಳನ್ನು ನಡೆಸಲಾಗಿದೆ, ಆದರೆ ಎರಡೂ ಕಡೆಯವರು ಹೆಚ್ಚಿನ ಆಸಕ್ತಿ ವಹಿಸಿ ಒಮ್ಮತಕ್ಕೆ ಬರಬೇಕಾಗುತ್ತದೆ ಎಂದರು.

ಕೆಲವು ವಿಷಯಗಳ ಬಗ್ಗೆ ಒಪ್ಪಂದ ಆಗಿದೆ,ಭಾರತ ಸರ್ಕಾರವು ರೈತರ ಹಿತಾಸಕ್ತಿಗಳಿಗಾಗಿ ಕೆಲಸ ಮಾಡಲು ಬದ್ಧವಾಗಿದೆ ಮತ್ತು ಅದು ಅದನ್ನು ಮಾಡುತ್ತಿದೆ ಎಂದು ಮುಂಡಾ ಹೇಳಿದ್ದು,ರೈತರು ಮುಷ್ಕರ ಕೈ ಬಿಡುವರೆ ಕಾದು ನೋಡಬೇಕಿದೆ.


Share this with Friends

Related Post