Fri. Nov 1st, 2024

ಬೃಹತ್ ಕ್ಯಾನ್ವಾಸ್ ಮೇಲೆ ಚಿತ್ರ ಬಿಡಿಸಿ ಸಂವಿಧಾನ ಜಾಗೃತಿ

Share this with Friends

ಮೈಸೂರು,ಫೆ.22:‌ ಮೈಸೂರಿನಲ್ಲಿ ಬೃಹತ್ ಕ್ಯಾನ್ವಾಸ್ ಮೇಲೆ ಸಂವಿಧಾನ ಸಂಬಂಧಿ ಚಿತ್ರಗಳನ್ನು ಬಿಡಿಸುವ ಮೂಲಕ ಸಂವಿಧಾನ ಜಾಗೃತಿ ಮೂಡಿಸಲಾಯಿತು.

ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು(ಕಾ.ವ) ವಿದ್ಯಾರ್ಥಿಗಳು ಅರಮನೆಯ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ಆಯೋಜಿಸಿದ್ದ ಬೃಹತ್ ಕ್ಯಾನ್ವಾಸ್ ಮೇಲೆ ಸಂವಿಧಾನ ಸಂಬಂಧಿ ಚಿತ್ರಗಳನ್ನು ಬಿಡಿಸುವ ಮೂಲಕ ಸಂವಿಧಾನ ಜಾಗೃತಿ ಜಾಥಾಗೆ ಜಿಲ್ಲಾಧಿಕಾರಿ ಡಾ. ಕೆ. ವಿ ರಾಜೇಂದ್ರ ಚಾಲನೆ ನೀಡಿದರು.

ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿವಿಧ ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರಿಗೆ ಸಂವಿಧಾನ ಪೀಠಿಕೆ ಹಾಗೂ ನಿರ್ದೇಶಕ ತತ್ವಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಪ್ರತಿಯೊಬ್ಬರೂ ಸಂವಿಧಾನದ ಬಗ್ಗೆ ತಿಳಿಯಬೇಕು ಎಂದು ರಾಜೇಂದ್ರ ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ರಂಗೇಗೌಡ ಅವರು ಮಾತನಾಡಿ ಭಾರತದ ಸಂವಿಧಾನದ ಬಗ್ಗೆ ಇಂದಿನ ಯುವಕರು ಹಾಗೂ ಸಾರ್ವಜನಿಕರು ಕಡಿಮೆ ಜ್ಞಾನವನ್ನು ಹೊಂದಿದ್ದಾರೆ. ಹಾಗಾಗಿ ಇದರ ಬಗ್ಗೆ ಜಾಗೃತಿ ಮೂಡಿಸಿ ಅರಿವು ತುಂಬುವುದೇ ಕಾರ್ಯಕ್ರಮದ ಮುಖ್ಯ ಉದ್ದೇಶ ಎಂದು ‌ತಿಳಿಸಿದರು.

ಈ ವೇಳೆ ಪ್ರಾಚ್ಯವಸ್ತು ಮತ್ತು ಸಂಗ್ರಹಾಲಯ ಇಲಾಖೆಯ ಆಯುಕ್ತ ದೇವರಾಜ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ಧಲಿಂಗು ಹಾಗೂ ಅಧಿಕಾರಿಗಳು ಹಾಜರಿದ್ದರು.


Share this with Friends

Related Post