Wed. Dec 25th, 2024

ಮಹಿಳೆ ಸಾವು ಪ್ರಕರಣ:ನಟ ಅಲ್ಲು ಅರ್ಜುನ್ ವಿಚಾರಣೆಗೆ ಹಾಜರು

Share this with Friends

ಹೈದರಾಬಾದ್: ಪುಷ್ಪಾ-2 ಚಿತ್ರದ ಪ್ರದರ್ಶನದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಮಹಿಳೆ ಸಾವನ್ನಪ್ಪಿದ ಪ್ರಕರಣ ಸಂಬಂಧ ನಟ ಅಲ್ಲು ಅರ್ಜುನ್ ಚಿಕ್ಕಡಪಲ್ಲಿ ಪೊಲೀಸರ ಮುಂದೆ ಮುಂದೆ ಹಾಜರಾದರು.

ಮಂಗಳವಾರ ಬೆಳಗ್ಗೆ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು,ಹಾಗಾಗಿ ಅವರು ವಿಚಾರಣೆಗೆ ಹಾಜರಾಗಿದ್ದರು.

ಡಿಸೆಂಬರ್ 4 ರಂದು ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ನಡೆದ ಕಾಲ್ತುಳಿತದಲ್ಲಿ 35 ವರ್ಷದ ಮಹಿಳೆ ಮೃತಪಟ್ಟಿದ್ದರು.

ಈ ಸಂಬಂಧ ಮೃತ ಮಹಿಳೆಯ ಕುಟುಂಬದವರು ನೀಡಿದ ದೂರಿನ ಮೇರೆಗೆ ಪೊಲೀಸರು ಅಲ್ಲು ಅರ್ಜುನ್, ಅವರ ಭದ್ರತಾ ತಂಡ ಮತ್ತು ಥಿಯೇಟರ್ ಆಡಳಿತದ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ವಿವಿಧ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು.

ಡಿಸೆಂಬರ್ 13 ರಂದು ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿತ್ತು.
ಅವರಿಗೆ ತೆಲಂಗಾಣ ಹೈಕೋರ್ಟ್ 4 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಈ ಪ್ರಕರಣ ದೊಡ್ಡ ವಿವಾದಕ್ಕೆ ಕಾರಣವಾಗಿದ್ದು, ನಟನ ಬೆಂಬಲಿಗರು ಮಹಿಳೆಯ ಸಾವು ಸಂಪೂರ್ಣವಾಗಿ ಅಪಘಾತ ಎಂದು ಹೇಳಿದರೆ, ಅಧಿಕಾರಿಗಳು ಅರ್ಜುನ್ ಮತ್ತು ಅವರ ತಂಡದ ಬೇಜವಾಬ್ದಾರಿ ಎಂದು ದೂರಿದ್ದಾರೆ.


Share this with Friends

Related Post