Fri. Apr 4th, 2025

ಲೈಂಗಿಕ ದೌರ್ಜನ್ಯ ಆರೋಪ: ಸೀರಿಯಲ್ ನಟ ಚರಿತ್ ಬಂಧನ

Share this with Friends

ಬೆಂಗಳೂರು: ಗೆಳತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮುದ್ದುಲಕ್ಷ್ಮಿ‌ ಧಾರವಾಹಿ ಖ್ಯಾತಿಯ ನಟ ಚರಿತ್ ಬಾಳಪ್ಪ ಬಂಧನವಾಗಿದೆ.

ಕನ್ನಡದ ಮುದ್ದುಲಕ್ಷ್ಮಿ, ಲವಲವಿಕೆ, ಸರ್ಪಸಂಬಂಧ ಸೇರಿದಂತೆ ತೆಲುಗಿನ ಅನೇಕ ಧಾರಾವಾಹಿಗಳಲ್ಲಿ ಚರಿತ್ ಬಾಳಪ್ಪ ನಟಿಸಿ ಹೆಸರುವಾಸಿಯಾಗಿದ್ದರು.

ನಟ ಚರಿತ್‌ನನ್ನು ರಾಜರಾಜೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ, ಲೈಂಗಿಕ ದೌರ್ಜನ್ಯ, ಕೊಲೆ ಬೆದರಿಕೆ ಹಾಗೂ ಹಲ್ಲೆ ಮಾಡಿರುವುದಾಗಿ ನಟನ ವಿರುದ್ಧ ಯುವತಿ ದೂರು ನೀಡಿದ್ದಾರೆ.

ನಿನ್ನನ್ನ ಪ್ರೀತಿಸುತ್ತೇನೆ ಎಂದು ಹೇಳಿ ದೈಹಿಕ ಸಂಪರ್ಕಕ್ಕೆ ಒತ್ತಾಯಿಸಿದ್ದಾನೆ. ಜೊತೆಗೆ ಯುವತಿ ವಾಸ ಮಾಡುತ್ತಿದ್ದ ಮನೆಗೆ ನುಗ್ಗಿ ಸಹಚರರ ಜೊತೆ ಕಿರುಕುಳ ನೀಡಿದ್ದಾನೆ. ಹಣಕ್ಕೂ ಬೇಡಿಕೆಯಿಟ್ಟಿದ್ದು, ಹಣ ಕೊಡದಿದ್ದರೆ ಖಾಸಗಿ ಫೋಟೋ, ವೀಡಿಯೋ ಹರಿಬಿಡುವ ಬೆದರಿಕೆ ಹಾಕಿದ್ದಾನೆ ಎಂದು ಯುವತಿ ಆರೋಪಿಸಿದ್ದಾರೆ.

ನಟ ಚರಿತ್ ಹಾಗೂ ಪತ್ನಿ ಮಂಜುಶ್ರೀ ಡಿವೋರ್ಸ್ ಪಡೆದಿದ್ದಾರೆ. ಕೋರ್ಟ್ ಆಜ್ಞೆಯಂತೆ ಡಿವೋರ್ಸ್ ಪರಿಹಾರ ಹಣಕ್ಕೆ ನೋಟಿಸ್ ಕಳಿಸಿದ್ದರಿಂದ ತನಗೆ ಬೆದರಿಕೆ ಹಾಕಿದ್ದಾರೆಂದು ಚರಿತ್ ವಿರುದ್ಧ ಪತ್ನಿ ಮಂಜುಶ್ರೀ ದೂರು ನೀಡಿದ್ದರು.


Share this with Friends

Related Post