Fri. Jan 10th, 2025

ಪ್ರತಾಪ ಸಿಂಹ ಉಚ್ಚಾಟನೆಗೆ ಬಿಜೆಪಿ ಪರಿಶಿಷ್ಟ ಪಂಗಡಗಳ ಮೋರ್ಚಾ ಆಗ್ರಹ

Share this with Friends

ಮೈಸೂರು: ಮಾಜಿ ಸಂಸದ ಪ್ರತಾಪ ಸಿಂಹ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡುವಂತೆ ಆಗ್ರಹಿಸಿ ಬಿಜೆಪಿ ಪರಿಶಿಷ್ಟ ಪಂಗಡಗಳ ಮೋರ್ಚಾ ವತಿಯಿಂದ ಪಕ್ಷದ ನಗರ ಅಧ್ಯಕ್ಷರಿಗೆ ಮನವಿ ಸಲ್ಲಿಸಲಾಯಿತು.

ಬಿಜೆಪಿ ಪರಿಶಿಷ್ಟ ಪಂಗಡಗಳ ಮೋರ್ಚಾ ನಿಕಟಪೂರ್ವ ಅಧ್ಯಕ್ಷ ಮೈ.ಕಾ. ಪ್ರೇಮ್ ಕುಮಾರ್ ಹಾಗೂ ಬಿಜೆಪಿ ಚಾಮರಾಜ ಕ್ಷೇತ್ರ ನಿಕಟಪೂರ್ವ ಉಪಾಧ್ಯಕ್ಷ ಕುಮಾರ್ ಗೌಡ
ಅವರುಗಳು ಪಕ್ಷದ ಮೈಸೂರು ನಗರಾಧ್ಯಕ್ಷ
ಎಲ್.ನಾಗೇಂದ್ರ ಮತ್ತು ಮೈಸೂರು ಗ್ರಾಮಂತರ (ಮೈಸೂರು ಜಿಲ್ಲಾ) ಅಧ್ಯಕ್ಷ
ಎಲ್.ಆರ್.ಮಹದೇವ ಸ್ವಾಮಿ ಅವರನ್ನು ಭೇಟಿ ಮಾಡಿ ಮನವಿಪತ್ರ ಸಲ್ಲಿಸಿದರು.

ಮಾಜಿ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಪಕ್ಷ ವಿರೋಧಿ ಚಟುವಟಿಕೆ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಕೋರಿದರು.

ಸುಮಾರು ಮೂವತ್ತು ವರ್ಷಗಳಿಗೂ ಹೆಚ್ಚು ಕಾಲದಿಂದ ನಾವು ಹಿಂದೂ ಸಂಘಟನೆ ಸೇರಿದಂತೆ ಭಾರತೀಯ ಜನತಾ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಮತ್ತು ಬ್ಲಾಕ್ ಮಟ್ಟ,ಜಿಲ್ಲಾ ಮಟ್ಟ ಹಾಗೂ ರಾಜ್ಯ ಮಟ್ಟದ ವಿವಿಧ ಜವಾಬ್ಧಾರಿಗಳನ್ನು ನಿರ್ವಹಿಸಿದ್ದೇವೆ,ಆದರೆ ಇತ್ತೀಚಿನ ದಿನಗಳಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ‌ ಅವರ ನಡೆಯಿಂದ ಪಕ್ಷಕ್ಕೆ ಹಾನಿ ಆಗುತ್ತಿದೆ ಮತ್ತು ನಮಗೆ ತೀವ್ರ ಬೇಸರವನ್ನು ಉಂಟುಮಾಡಿವೆ ಎಂದು ತಿಳಿಸಿದ್ದಾರೆ.

ಪ್ರತಾಪ್ ಸಿಂಹ ಅವರು ಪ್ರಜಾಪ್ರಭುತ್ವದ ದೇಗುಲವೆಂದೇ ಕರೆಯಲ್ಪಡುವ ದೇಶದ ಸಂಸತ್ ಭವನದ ಒಳಗೆ ಸ್ಮೋಕ್ ಬಾಂಬ್ ದಾಳಿ ನಡೆಸಿದ ಭಯೋತ್ಪಾದಕರಿಗೆ ಯಾವುದೇ ಪೂರ್ವಾಪರ ಪರಿಶೀಲಿಸದೆ ಒಳಗೆ ಪ್ರವೇಶಿಸಲು ಪಾಸ್ ನೀಡಿರುವುದು ಮುಜುಗರಸೃಷ್ಟಿಸಿತ್ತು.

ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ತಮ್ಮದಲ್ಲದ ವರುಣಾ ಕ್ಷೇತ್ರದಲ್ಲಿ ಮಾತ್ರ ಹೆಚ್ಚು ಪ್ರಚಾರ ನಡೆಸಿ, ಮೈಸೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಕ್ಷೇತ್ರಗಳಲ್ಲಿ ಉದ್ದೇಶಪೂರ್ವಕವಾಗಿಯೇ ಪ್ರಚಾರದಿಂದ ಹಿಂದೆ ಸರಿದಿದ್ದು, ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಬಿಜೆಪಿಯ ಅಭ್ಯರ್ಥಿಗಳ ಸೋಲಿಗೆ ಕಾರಣರಾಗಿದ್ದಾರೆ.

ವಿಧಾನಪರಿಷತ್ ಚುನಾವಣೆ ಸಂದರ್ಭದಲ್ಲಿ ಮತದಾನಕ್ಕೆ ಕ್ಷಣಗಣನೆ ಪ್ರಾರಂಭವಾದ ಸಂದರ್ಭದಲ್ಲಿ ನ್ಯಾಯವಾದಿಗಳ ವಿರುದ್ಧ ಹೇಳಿಕೆ ನೀಡುವ ಮುಖಾಂತರ ಸಾವಿರಾರು ಮತಗಳು ಭಾರತೀಯ ಜನತಾ ಪಕ್ಷದ ಅಧಿಕೃತ ಅಭ್ಯರ್ಥಿ ಮೈ.ವಿ.ರವಿ ಶಂಕರ್ ವಿರುದ್ಧ ಮತ ಬೀಳುವಂತೆ ಮಾಡುವ ಕೃತ್ಯವನ್ನು ಮಾಡಿದ್ದಾರೆ‌

ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನಮ್ಮ ಪಕ್ಷದ ಅಧಿಕೃತ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ವಿರುದ್ಧ ಹಲವಾರು ರೀತಿಯ ಅಪಪ್ರಚಾರಗಳನ್ನು ನಡೆಸಿದ್ದರು ಹೀಗೆ ಹಲವಾರು ಅಸರೋಪಗಳನ್ನು ಪಟ್ಟಿಮಾಡಿ ಪ್ರತಾಪ್ ಸಿಂಹ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು,ಪಕ್ಷ ದಿಂದ‌ ಉಚ್ಛಾಟನೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.


Share this with Friends

Related Post