Sat. Mar 7th, 2026

ನೀವಿನ್ನೂ ಜಾತಿಗಣತಿ ಸಮೀಕ್ಷೆಗೊಳಪಟ್ಟಿಲ್ಲವೇ?: ಆನ್ ಲೈನ್ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಇನ್ನೂ ಇದೆ ಅವಕಾಶ..!

Share this with Friends

ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಭೌತಿಕ ರೂಪದಲ್ಲಿ ಪೂರ್ಣಗೊಂಡು, ಆನ್ ಲೈನ್ (online) ಮೂಲಕ ಸಮೀಕ್ಷೆಯಲ್ಲಿ ಸ್ವಯಂ ಪಾಲ್ಗೊಳ್ಳುವ ಅವಧಿಯನ್ನು ನವೆಂಬರ್ 30 ರವರೆಗೆ ವಿಸ್ತರಿಸಲಾಗಿದೆ.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಜನರ ಹಿಂದುಳಿದ ವರ್ಗಗಳು, ಇತರೆ ಜಾತಿಗಳು ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಂಡಿದ್ದು, ವಿವಿಧ ಕಾರಣಗಳಿಂದಾಗಿ ಸಮೀಕ್ಷೆಯಲ್ಲಿ ಭಾಗವಹಿಸಲು ಸಾಧ್ಯವಾಗದೇ ಇರುವವರಿಗೆ ಅವಕಾಶ ನೀಡುವ ಹಿನ್ನೆಲೆಯಲ್ಲಿ ಆನ್ ಲೈನ್ (online) ಮೂಲಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವ ಅವಧಿಯನ್ನು 2025 ರ ನವೆಂಬರ್ 10  ರವರೆಗೆ ವಿಸ್ತರಿಸಲಾಗಿತ್ತು. ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಎಲ್ಲರಿಗೂ ಅವಕಾಶ ನೀಡುವ ದೃಷ್ಟಿಯಿಂದ ಆನ್ ಲೈನ್  ಲಿಂಕ್ https://kscbcselfdeclaration.karnataka.gov.in  ಮೂಲಕ ಸ್ವಯಂ ಪಾಲ್ಗೊಳ್ಳುವ ಅವಧಿಯನ್ನು ಅಂತಿಮವಾಗಿ ನವೆಂಬರ್ 30 ರವರೆಗೆ ವಿಸ್ತರಿಸಲಾಗಿದೆ.

ಸಮೀಕ್ಷೆಯಲ್ಲಿ ಇದುವರೆಗೂ ಪಾಲ್ಗೊಳ್ಳದೇ ಇರುವವರು ಸದರಿ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಆಯೋಗ ಕೋರಿದ್ದು,ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ – 8050770004 ನ್ನು ಸಂಪರ್ಕಿಸಬಹುದು ಎಂದು  ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share this with Friends

Related Post