Fri. Mar 6th, 2026

ನಾಳೆ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ,ಎಂದಿನಂತೆ ತರಗತಿ ನಡೆಯಲಿವೆ: ಶಿಕ್ಷಣ ಇಲಾಖೆ ಸ್ಪಷ್ಟನೆ

Share this with Friends

ಬೆಂಗಳೂರು: ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನದ ಹಿನ್ನಲೆಯಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ‌ ರಜೆ ಘೋಷಣೆ ಮಾಡಿಲ್ಲ, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪತ್ರ ನಕಲ ಎಂದು ಶಾಲಾ ಶಿಕ್ಷಣ ಮತ್ತ ಸಾಕ್ಷರತಾ ಇಲಾಖೆ ಸ್ಪಷ್ಟೀಕರಣ ನೀಡಿದೆ.

ಸಾಮಾಜಿಕ ಜಾಲತಾಣಗಳಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಸಾಲುಮರದ ತಿಮ್ಮಕ್ಕ ನಿಧನರಾಗಿದ್ದು ಸರ್ಕಾರಿ ಗೌರವದೊಂದಿಗೆ ಅಂತ್ಯ ಸಂಸ್ಕಾರ ಮಾಡಲಾಗುತ್ತದೆ ಹಾಗಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎನ್ನುವ ಪತ್ರ ಹರಿದಾಡುತ್ತಿದೆ.ಇದನ್ನು ಗಮನಿಸಿದ ಶಾಲಾ ಶಿಕ್ಷಣ ಮತ್ತ ಸಾಕ್ಷರತಾ ಇಲಾಖೆ

ಸಾಲು ಮರದ ತಿಮ್ಮಕ್ಕ ಅವರ ನಿಧನದ ಹಿನ್ನೆಲೆಯಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎನ್ನುವುದು ಸುಳ್ಳು.ಸಾಮಾಜಿಕ‌ ಜಾಲ ತಾಣದಲ್ಲಿ ಈ ಬಗ್ಗೆ ಹರಿದಾಡುತ್ತಿರುವ ಪತ್ರ ನಕಲಿಯದ್ದಾಗಿದೆ ಎಂದು ಸ್ಪಷ್ಟನೆ ನೀಡಿದೆ.ಅಲ್ಲದೆ ಎಂದಿನಂತೆ ತರಗತಿಗಳು ನಡೆಯಲಿವೆ ಎಂದು ತಿಳಿಸಿದೆ.


Share this with Friends

Related Post