Sat. Mar 7th, 2026

ಕಸ ಗುಡಿಸುವ ಯಂತ್ರ ಬಾಡಿಗೆ ವಿಚಾರದಲ್ಲಿ ಭ್ರಷ್ಟಾಚಾರ ನಡೆದಿದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ: ಡಿಕೆ ಶಿವಕುಮಾರ್

Share this with Friends

ಬೆಂಗಳೂರು: ಕಸ ಗುಡಿಸುವ ಯಂತ್ರ ಬಾಡಿಗೆ ವಿಚಾರದಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರ ನಡೆದಿಲ್ಲ,ಇದರಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ನಾವು ತನಿಖೆ ನಡೆಸಲು ಸಿದ್ಧರಿದ್ದೇವೆ,ಶೋಭಾ ಕರಂದ್ಲಾಜೆ ಹಾಗು ನಿಖಿಲಗ ಕುಮಾರಸ್ವಾಮಿ ಅವರಿಗೆ ಅನುಮಾನವಿದ್ದಲ್ಲಿ ಲೋಕಾಯುಕ್ತ ಅಥವಾ ಸೂಕ್ತ ತನಿಖಾ ಸಂಸ್ಥೆಗೆ ದೂರು ನೀಡಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ‌.

‘ನೀಲಿ ದಳ’ (ಬ್ಲೂ ಪೋರ್ಸ್) ಹಾಗೂ ರೋಬೋಟಿಕ್ ತಂತ್ರಜ್ಞಾನ ಬಳಕೆಗೆ ಚಾಲನೆ ನೀಡಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು,ಕಸ ಗುಡಿಸುವ ಯಂತ್ರ ಬಾಡಿಗೆ ವಿಚಾರದಲ್ಲಿ ಭ್ರಷ್ಟಾಚಾರ ನಡೆದಿದ್ದರೆ ಸೂಕ್ತ ತನಿಖಾ ಸಂಸ್ಥೆಗೆ ದೂರು ನೀಡಲಿ. ನಾನು ಕೇಂದ್ರ ಶೋಭಾ ಕರಂದ್ಲಾಜೆ ಅವರಿಗೆ ಉತ್ತರಿಸುತ್ತೇನೆಯೇ ಹೊರತು ನಿಖಿಲ್ ಗಲ್ಲ. ಕಸ ಗುಡಿಸುವ ಯಂತ್ರಗಳ ಬಗ್ಗೆ ಅಧ್ಯಯನ ನಡೆಸಿಯೇ ಮುಂದುವರೆದಿರುವುದು. ಇದು ಕೇವಲ ಒಂದು ವರ್ಷದ‌ ಯೋಜನೆಯಲ್ಲ. ಏಳು ವರ್ಷಗಳ ಯೋಜನೆ. ಇದರಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ನಾವು ತನಿಖೆ ನಡೆಸಲು ಸಿದ್ಧರಿದ್ದೇವೆ ಎಂದರು.

ಶೋಭಾ ಕರಂದ್ಲಾಜೆ ಅವರ ಟೀಕೆಗಳನ್ನು ನಾನು ಸ್ವಾಗತ ಮಾಡುತ್ತೇನೆ. ಅವರ ಪ್ರಶ್ನೆಗಳಿಗೆ ಉತ್ತರಿಸುವಂತೆ ಅಧಿಕಾರಿಗಳಿಗೆ ಸೂಚಿಸುತ್ತೇನೆ. ಈ ವಿಚಾರದಲ್ಲಿ ನಾವು ಪಾರದರ್ಶಕವಾಗಿದ್ದೇವೆ. ಈ ಮೊತ್ತ ದೊಡ್ಡದಾಗಿ ಕಾಣುತ್ತಿರಬಹುದು. ಇದು ಕೇವಲ ವಾಹನದ ವಿಚಾರವೊಂದೇ ಇಲ್ಲ. ಚಾಲಕ, ಸಹಾಯಕ, ಸ್ವಚ್ಛ ಮಾಡುವವರು ಸೇರಿದಂತೆ ಅನೇಕ ವಿಚಾರಗಳಿವೆ. ಎಲ್ಲಾ ಆಯಾಮಗಳಿಂದ ಆಲೋಚಿಸಿ ಸರ್ಕಾರ ಈ ತೀರ್ಮಾನ ಕೈಗೊಂಡಿದೆ ಎಂದು ತಿಳಿಸಿದರು.

ಎರಡನೇ ಬೆಳೆಗೆ ತುಂಗಭದ್ರಾ ನೀರು ಹರಿಸುವ ವಿಚಾರವಾಗಿ ರೈತರ ಜೊತೆ ಸೇರಿ ಜೆಡಿಎಸ್ ಹೋರಾಟದ ಬಗ್ಗೆ ಕೇಳಿದಾಗ, “ಅವರು ಪ್ರತಿಭಟನೆ ಮಾಡಿದಾಗಲೇ ನಾವು ಏನು ಕೆಲಸ ಮಾಡಿದ್ದೇವೆ ಎಂಬುದು ಜನರಿಗೆ ತಿಳಿಯಲಿದೆ. ಈಗ ಏಕೆ ಪ್ರತಿಭಟನೆ ಮಾಡುತ್ತಿದ್ದಾರೆ. ಮೊದಲು ಕೇಂದ್ರ ಸರ್ಕಾರದ ಬಳಿ ತೆರಳಿ ನಾನು ಒಂದಷ್ಟು ಯೋಜನೆಗಳ ಬಗ್ಗೆ ಅರ್ಜಿ ಹಾಕಿದ್ದು ಅವುಗಳ ಅನುಷ್ಠಾನಕ್ಕೆ ಒಪ್ಪಿಗೆ ಪಡೆಯಲಿ. ಬಿಜೆಪಿ ಸಂಸದರನ್ನು ಕರೆದುಕೊಂಡು ಹೋಗಿ ಪ್ರತಿಭಟನೆ ನಡೆಸಿ, ಅಗತ್ಯ ಅನುದಾನ ತೆಗೆದುಕೊಂಡು ಬರಲಿ. ನಮ್ಮ ಪಾಲಿನ 28-30 ಟಿಎಂಸಿ ತುಂಗಭದ್ರಾ ನೀರು ಆಂದ್ರಕ್ಕೆ ಸೇರುತ್ತಿದೆ. ಚಂದ್ರಬಾಬು ನಾಯ್ಡು ಅವರು ಇದರ ಸಭೆಗೆ ಬರುತ್ತಿಲ್ಲ. ಮೊದಲು ಅವರಿಂದ ಒಪ್ಪಿಗೆ ಕೊಡಿಸಲಿ” ಎಂದು ತಿವಿದರು.

ಕುಮಾರಸ್ವಾಮಿ ಅವರನ್ನು ಜೊತೆಯಲ್ಲಿ ಕರೆದುಕೊಂಡು ಹೋದರೆ ಭೇಟಿಯಾಗಬಹುದು ಎನ್ನುವ ಬಗ್ಗೆ ಕೇಳಿದಾಗ, “ನಾನು ಇದಕ್ಕೆ ತಯಾರಿದ್ದೇನೆ‌. ಅವರೇ ಸಮಯ ನಿಗದಿ ಮಾಡಲಿ ನಾನು ಹೋಗಲು ತಯಾರಿದ್ದೇನೆ” ಎಂದರು.


Share this with Friends

Related Post