Fri. Mar 6th, 2026

ಮೋದಿ ಭೇಟಿಯ ದಿನ ಶಾಲೆಗಳಿಗೆ ರಜೆ:ಉಡುಪಿ ಜಿಲ್ಲಾಡಳಿತ ಆದೇಶ

Share this with Friends

ಉಡುಪಿ: ಪ್ರಧಾನಿ ನರೇಂದ್ರ ಮೋದಿ ನವೆಂಬರ್ 28 ರಂದು ಉಡುಪಿಗೆ ಭೇಟಿ ನೀಡುತ್ತಿದ್ದು, ಅಂದು ಒಂದು ದಿನ ಉಡುಪಿಯ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶಿಸಿದೆ.

ಪ್ರಧಾನ ಮಂತ್ರಿಗಳು 28 ರಂದು ಉಡುಪಿ ಜಿಲ್ಲೆಯ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ನಿಯಮಾನುಸಾರ ಶಿಷ್ಟಾಚಾರವನ್ನು ಪಾಲಿಸಬೇಕಾಗುವುದರಿಂದ ಹಾಗೂ ಪ್ರಧಾನಮಂತ್ರಿಯವರ ಜಿಲ್ಲಾ ಭೇಟಿ ಸಂದರ್ಭದಲ್ಲಿ ಕೇಂದ್ರ ಸಚಿವರು, ಕರ್ನಾಟಕ ಗೌರವಾನ್ವಿತ ರಾಜ್ಯಪಾಲರು, ಮಾನ್ಯ ಮುಖ್ಯಮಂತ್ರಿಗಳು, ರಾಜ್ಯ ಸಚಿವರುಗಳು ಹಾಗೂ ಮುಖ್ಯ ಕಾರ್ಯದರ್ಶಿಗಳು ಬರುವ ಸಾಧ್ಯತೆ ಇರುವುದರಿಂದ, ಸುರಕ್ಷತೆ, ಭದ್ರತೆ ಹಾಗೂ ಸೂಕ್ತ ಶಿಷ್ಟಾಚಾರ ಪಾಲಿಸಲು, ಅಂದು ಕಾರ್ಯಕ್ರಮ ಸುಗಮವಾಗಿ ಜರುಗಲು ಮತ್ತು ಶಿಸ್ತು, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಕಾರ್ಯಕ್ರಮಗಳನ್ನು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಪೋಲೀಸ್ ಅಧೀಕ್ಷಕರು, ಕೋರಿದ  ಹಿನ್ನಲೆಯಲ್ಲಿ ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದೆ.

ಪ್ರಧಾನ ಮಂತ್ರಿಯವರ ಉಡುಪಿ ಭೇಟಿ ಸಂದರ್ಭದಲ್ಲಿ ಶಾಲಾ ಮಕ್ಕಳ ಸಂಚಾರಕ್ಕೆ ತೊಡಕು ಉಂಟಾಗುವ ಸಾಧ್ಯತೆಗಳಿರುವುದರಿಂದ, ಶಾಲಾ ಮಕ್ಕಳ ಸುರಕ್ಷತೆ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಮುಂಜಾಗೃತಾ ಕ್ರಮವಾಗಿ ಉಡುಪಿ ನಗರ ಠಾಣಾ ವ್ಯಾಪ್ತಿಯ, ಮಲ್ಪೆ ಠಾಣಾ ವ್ಯಾಪ್ತಿಯ ಮತ್ತು ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ 28 ರಂದು ಒಂದು ದಿನದ ಮಟ್ಟಿಗೆ ರಜೆಯನ್ನು ಘೋಷಿಸಿ ಜಿಲ್ಲಾಡಳಿತ ಆದೇಶಿಸಿದೆ. ಪ್ರಸ್ತುತ ನೀಡಿರುವ ರಜೆ ಅವಧಿಯಲ್ಲಿ ನಿರ್ವಹಿಸಬೇಕಾದ ಪಠ್ಯವನ್ನು ಇತರೆ ಸಾರ್ವತ್ರಿಕ ರಜಾದಿನಗಳಂದು ಸರಿದೂಗಿಸಿಗೊಂಡು ನಿರ್ವಹಿಸುವಂತೆ ಸೂಚಿಸಿದೆ.


Share this with Friends

Related Post