Thu. Mar 5th, 2026

ಮೆಕ್ಕೆಜೋಳದ ಖರೀದಿ ಬಗ್ಗೆ ಸ್ಪಷ್ಟವಾಗಿ ಹೇಳುವವರೆಗೂ ವಿಧಾನ ಮಂಡಲದಲ್ಲಿ ಹೋರಾಟ: ಬಸವರಾಜ ಬೊಮ್ಮಾಯಿ

Share this with Friends

ಹಾವೇರಿ: ಕರ್ನಾಟಕದ 19 ಜಿಲ್ಲೆಗಳಲ್ಲಿ ಮೆಕ್ಕೆಜೋಳ ಬೆಳೆಯುತ್ತಾರೆ. 54 ಲಕ್ಷ ಮೆಟ್ರಿಕ್ ಟನ್ ಉತ್ಪಾದನೆಯಾಗುವ ಸಾಧ್ಯತೆ ಇದೆ. ಮೆಕ್ಕೆಜೋಳದ ಖರೀದಿ ಬಗ್ಗೆ ಸರ್ಕಾರ ಸ್ಪಷ್ಟವಾಗಿ ಹೇಳುವವರೆಗೂ ವಿಧಾನ ಮಂಡಲದಲ್ಲಿ ಹೋರಾಟ ಮಾಡಲು ಬಿಜೆಪಿ ನಿರ್ಧರಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ರಾಜ್ಯ ಸರ್ಕಾರ ಮೆಕ್ಕೆಜೋಳ ಖರೀದಿಸಲು ಮಾರ್ಕೆಟಿಂಗ್ ಫೆಡರೇಷನ್‌ಗೆ ದುಡ್ಡು ಕೊಟ್ಟು ಖರೀದಿಗೆ ಸೂಚನೆ ನೀಡಿದರೆ ಅವರು ಖರೀದಿ ಆರಂಭಿಸುತ್ತಾರೆ. ನಿಮ್ಮನ್ನು ಕುರ್ಚಿಯಲ್ಲಿ ಕೂಡಿಸಿದ ರೈತರ ಬದುಕು ಸಂಕಷ್ಟದಲ್ಲಿದೆ. ರೈತರ ಉಳಿಸಲು ನೀವು ಈ ಕೆಲಸ ಮಾಡಬೇಕು. ಕುರ್ಚಿ ವ್ಯವಹಾರ ಆ ಮೇಲೆ ಮಾಡಿಕೊಳ್ಳಿ ಎಂದು

ಇಂದು ಹಾವೇರಿ ಜಿಲ್ಲೆಯ ಜಿಲ್ಲಾಡಳಿತ ಭವನ ಮುಂಭಾಗದಲ್ಲಿ ಸಮಗ್ರ ರೈತ ಸಂಘಟನೆಗಳ ಒಕ್ಕೂಟದ ವತಿಯಿಂದ ರೈತರು ನಡೆಸುತ್ತಿರುವ ಸತ್ಯಾಗ್ರಹ ಹಾಗೂ ಪ್ರತಿಭಟನೆ ನಿರತ ರೈತರ ಸ್ಥಳಕ್ಕೆ  ಭೇಟಿ ನೀಡಿ ರೈತರನ್ನು ಉದ್ದೇಶಿಸಿ ಮಾತನಾಡಿದ ಅವರು,ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯುವಂತೆ ಈಗಾಗಲೇ ಸಿಎಂಗೆ ಪತ್ರ ಬರೆದಿದ್ದೇನೆ. ಅವರು ಖರೀದಿಸಲು ಆದೇಶ ಮಾಡಿದ್ದಾರೆ. ಆದರೆ, ಯಾವ ಏಜೆನ್ಸಿಯಿಂದ ಖರೀದಿ ಮಾಡುತ್ತಾರೆ ಎಂದು ತಿಳಿಸುತ್ತಿಲ್ಲ. ಮಾರ್ಕೆಟಿಂಗ್ ಫೆಡರೇಷನ್‌ಗೆ ದುಡ್ಡು ಕೊಟ್ಟು ಖರೀದಿಗೆ ಸೂಚನೆ ನೀಡಿದರೆ ಅವರು ಖರೀದಿ ಆರಂಭಿಸುತ್ತಾರೆ. ಯಾರು ಸಿಎಂ ಆಗಿರುತ್ತೀರೋ ಗೊತ್ತಿಲ್ಲ. ನಿಮ್ಮನ್ನು ಕುರ್ಚಿಯಲ್ಲಿ ಕೂಡಿಸಿದ ರೈತರ ಬದುಕು ಸಂಕಷ್ಟದಲ್ಲಿದೆ. ರೈತರ ಉಳಿಸಲು ನೀವು ಈ ಕೆಲಸ ಮಾಡಬೇಕು. ಕುರ್ಚಿ ವ್ಯವಹಾರ ಆ ಮೇಲೆ ಮಾಡಿಕೊಳ್ಳಿ ಎಂದರು.

ನಾನೂ ಕೂಡ ಕೇಂದ್ರ ಕೃಷಿ ಸಚಿವರನ್ನು ಭೇಟಿ ಮಾಡಿ, ರಾಜ್ಯ ಸರ್ಕಾರ ಮಾಡಿರುವ ಮನವಿಗೆ ಸ್ಪಂದಿಸುವಂತೆ ಮನವಿ ಮಾಡುತ್ತೇನೆ. ನಾವು ಯಾವಾಗಲೂ ರೈತರ ಪರವಾಗಿ ನಿಲ್ಲುತ್ತೇವೆ. ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಬೇಕು. 10 ಲಕ್ಷ ಮೆಟ್ರಿಕ್ ಟನ್ ಖರಿದಿಸುವುದಾಗಿ ಆದೇಶ ಮಾಡಿದ್ದಾರೆ. ನೆಪ ಹೇಳದೇ 10 ಲಕ್ಷ ಮೆಟ್ರಿಕ್ ಟನ್ ರೈತರಿಂದ ನೇರವಾಗಿ ಖರೀದಿ ಮಾಡಲಿ, ಪೆಟ್ರೋಲ್‌ಗೆ ಎಥೆನಾಲನ್ನು ಶೇ 20 ರಷ್ಟು ಸೇರಿಸಬೇಕೆನ್ನುವುದು ಕೇಂದ್ರದ ನೀತಿ. ಇವರಿಗೆ ಎಷ್ಟು ಕಾರ್ಖಾನೆ  ತೆರೆಯಬೇಕು ಎನ್ನುವುದು ಗೊತ್ತಿಲ್ಲ. ಕಾರ್ಖಾನೆ ಮಾಲಿಕರ ಪರವಾಗಿ ಮಾತನಾಡುತ್ತಾರೆ. ಏಜೆಂಟರಿಂದ ಖರೀದಿ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಬೆಡ್ತಿ ವರದಾ ಜೋಡಣೆ ಸಕಾರಾತ್ಮಕ ಸ್ಪಂದನೆ:

ಬೆಡ್ತಿ ವರದಾ ನದಿ ಜೋಡಣೆ ಯೋಜನೆ ಜಾರಿಗೆ ನಾವು ದೊಡ್ಡ ಪ್ರಮಾಣದಲ್ಲಿ ತೆಗೆದುಕೊಂಡಿದ್ದೇವೆ. ಈಗ ಕೇಂದ್ರ ಸರ್ಕಾರ ಆಸಕ್ತಿ ತೆಗೆದುಕೊಂಡು ಡಿಪಿಆರ್ ಮಾಡಲು ಅನುಮತಿ ನೀಡಿದೆ. ರಾಜ್ಯ ಸರ್ಕಾರ ಡಿಪಿಆರ್ ಸಿದ್ಧತೆಗೆ ಕ್ರಮ ಕೈಗೊಳ್ಳುತ್ತಿದೆ. ಡಿಪಿಆರ್ ಕೇಂದಕ್ಕೆ ಹೋದ ತಕ್ಷಣ ಅನುಮತಿ ಕೊಡಿಸುವ ಕೆಲಸ ಮಾಡುತ್ತೇನೆ. ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಯಾರೋ ನಾಲ್ಕು ಜನ ಬಂದು ಮನವಿ ಕೊಟ್ಟರೆ ಸಿಎಂ ಸ್ಪಂದಿಸಬಾರದು. ಈ ರಾಜ್ಯದ ನೀರಿನ ಸಂಪತ್ತು ಎಲ್ಲರಿಗೂ ಸೇರಿದ್ದು, ಕೃಷ್ಣಾ ನದಿ ಮಹಾರಾಷ್ಟ್ರದಲ್ಲಿ ಹುಟುತ್ತದೆ. ಮಹಾರಾಷ್ಟ್ರದವರೇ ಇಟ್ಟುಕೊಳ್ಳಲು ಆಗುತ್ತದೆಯೇ, ಉತ್ತರ ಕನ್ನಡದ ನಿಸರ್ಗಕ್ಕೆ ತೊಂದರೆಯಾಗದಂತೆ, ಯಾವುದೇ ಮುಳುಗಡೆಯಾಗದಂತೆ ಯೋಜನೆ ಜಾರಿ ಮಾಡಲಾಗುವುದು. ಅವರ ಮನವಿಗೆ ಸಿಎಂ ಯಾವುದೇ ರೀತಿಯ ಸ್ಪಂದನೆ ಮಾಡಬಾರದು ಎಂದು ಮನವಿ ಮಾಡಿದರು.


Share this with Friends

Related Post