ಬೆಂಗಳೂರು:ಯುಜಿ ಆಯುಷ್ ಕೋರ್ಸ್ ಗಳ ಪ್ರವೇಶಕ್ಕೆ ಎರಡನೇ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಿದ್ದು, ಶುಲ್ಕ ಪಾವತಿ ಹಾಗೂ ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿಕೊಳ್ಳಲು ಡಿ.3ರವರಗೆ ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳು ಮೂಲ ದಾಖಲೆಗಳ ಸಮೇತ ಡಿ.4ರೊಳಗೆ ಕಾಲೇಜುಗಳಲ್ಲಿ ಪ್ರವೇಶ ಪಡೆಯಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
ಪಿಜಿ ಆಯುಷ್: 3ನೇ ಸುತ್ತಿನ ಸೀಟು ಹಂಚಿಕೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ
ಸ್ನಾತಕೋತ್ತರ ಆಯುಷ್ (ಪಿಜಿ ಆಯುಷ್) ಕೋರ್ಸ್ ಗಳ ಪ್ರವೇಶ ಸಂಬಂಧ ಮೂರನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಡಿ.4ರಿಂದ ಆರಂಭವಾಗಲಿದ್ದು ಈ ಸುತ್ತಿನಲ್ಲಿ ಭಾಗವಹಿಸಲು ಇಚ್ಛಿಸುವವರು ಕೂಡ ಹೊಸದಾಗಿ ಆನ್ ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
ಅರ್ಹತೆ ಪಡೆದು, ಪ್ರಾಧಿಕಾರದಲ್ಲಿ ನೋಂದಣಿ ಮಾಡದಿರುವ ಅಭ್ಯರ್ಥಿಗಳು ಡಿ.2ರಿಂದ 4ರವರೆಗೆ ನೋಂದಣಿ ಮಾಡಿಕೊಂಡು ಶುಲ್ಕ ಪಾವತಿಸಬೇಕು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.3ನೇ ಸುತ್ತಿಗೆ ಹೊಸದಾಗಿ ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಡಿ.4ರಿಂದ 6ರಂದು ಬೆಳಿಗ್ಗೆ 11 ಗಂಟೆವರೆಗೆ ಅವಕಾಶ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.ಡಿ.6ರಂದು ಸಂಜೆ 7ಗಂಟೆಗೆ ತಾತ್ಕಾಲಿಕ ಫಲಿತಾಂಶ ಹಾಗೂ ಡಿ.8ರಂದು ಬೆಳಿಗ್ಗೆ 11ಕ್ಕೆ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಅವರು ವಿವರಿಸಿದರು.
ಸೀಟು ಹಂಚಿಕೆಯಾದವರು ಡಿ.8ರಿಂದ 9ರವರೆಗೆ ಶುಲ್ಕ ಪಾವತಿ ಹಾಗೂ ಡಿ.10ರವರೆಗೂ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಅಂದೇ ಸಂಜೆಯೊಳಗೆ ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕು ಎಂದು ಅವರು ವಿವರಿಸಿದ್ದಾರೆ.
ದಿನಾಂಕ ವಿಸ್ತರಣೆ:
ಪಿಜಿ ಆಯುಷ್ ಕೋರ್ಸ್ ಗೆ ಎರಡನೇ ಸುತ್ತಿನಲ್ಲಿ ಸೀಟು ಸಿಕ್ಕವರು ಶುಲ್ಕ ಪಾವತಿಸಿ, ಕಾಲೇಜಿಗೆ ವರದಿ ಮಾಡಿಕೊಳ್ಳಲು ಡಿ.3ರವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.

