Fri. Mar 6th, 2026

ಯತ್ನಾಳ್ ಬಿಜೆಪಿ ಸೇರ್ಪಡೆ ಚರ್ಚೆಯಾಗಿಲ್ಲ: ವಿಜಯೇಂದ್ರ

Share this with Friends

ಕಾರವಾರ: ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಮರಳಿ ಪಕ್ಷಕ್ಕೆ ಸೇರಿಸಿಕೊಳ್ಳುವ ಸಂಬಂಧ ರಾಜ್ಯ ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸ್ಪಷ್ಟಪಡಿಸಿದ್ದು, ಯತ್ನಾಳ್ ಸಭೆ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ,ಎಲ್ಲವನ್ನೂ ಹೈಕಮಾಂಡ್ ನೋಡಿಕೊಳ್ಳಲಿದೆ ಎಂದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ವಸನಗೌಡ ಪಾಟೀಲ್ ಯತ್ನಾಳ್ ಅವರು ಸಭೆ ಮಾಡಲು ಸ್ವತಂತ್ರರಿದ್ದಾರೆ ಅವರ ಸಭೆಗಳ ಬಗ್ಗೆ ಟೀಕೆ ಮಾಡುವುದಿಲ್ಲ ಚರ್ಚೆಯನ್ನು ಮಾಡುವುದಿಲ್ಲ ನಮ್ಮದು ರಾಷ್ಟ್ರೀಯ ಪಕ್ಷ ಏನೇ ತೀರ್ಮಾನ ಆದರೂ ರಾಷ್ಟ್ರಮಟ್ಟದಲ್ಲಿ ಆಗಲಿದೆ, ನಮ್ಮ ರಾಷ್ಟ್ರೀಯ ನಾಯಕರು ತೀರ್ಮಾನ ಮಾಡುತ್ತಾರೆ ಹಾಗಾಗಿ ಅವರ ಸಭೆಗಳ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ ಎಂದರು.

ಯತ್ನಾಳ್ ಬಿಜೆಪಿ ಸೇರ್ಪಡೆ ಕುರಿತು ರಾಜ್ಯದ ಅಧ್ಯಕ್ಷನಾಗಿ ಅಂತಹ ಯಾವುದೇ ಮಾಹಿತಿ ನನಗೆ ಲಭ್ಯವಾಗಿಲ್ಲ,  ರಾಜ್ಯಮಟ್ಟದಲ್ಲಿ ಆಗಲಿ ನನ್ನ ಬಳಿಯಾಗಲಿ ಆ ರೀತಿ ಯಾರೂ ಪ್ರಸ್ತಾಪ ಮಾಡಿಲ್ಲ ಎಂದರು.

ದಿನೇ ದಿನೇ ಮುಖ್ಯಮಂತ್ರಿ ಕುರ್ಚಿಗೆ ಪೈಪೋಟಿ ಹೆಚ್ಚಾಗುತ್ತಿದೆ ನನಗೆ ಇರುವ ಮಾಹಿತಿಯ ಪ್ರಕಾರ ಆಡಳಿತ ಪಕ್ಷದಲ್ಲಿ ಏಳೆಂಟು ಜನ ಹಿರಿಯ ಶಾಸಕರು ಮಂತ್ರಿಗಳು ಯಾರಾದರೂ ಒಬ್ಬರು ನನ್ನ ಮುಖ್ಯಮಂತ್ರಿ ಆಗಬೇಕು ಎಂದು ಪೈಪೋಟಿಗೆ ಇಳಿದಿದ್ದಾರೆ

ಸಿಎಂ ಕುರ್ಚಿಗೆ ಏಳೆಂಟು ಜನರ ಪೈಪೋಟಿ

ಮುಖ್ಯಮಂತ್ರಿ ಕುರ್ಚಿಗೆ ದಿನೇದಿನೇ ಪೈಪೋಟಿ ಜಾಸ್ತಿ ಆಗುತ್ತಿದೆ. ನನಗಿರುವ ಮಾಹಿತಿ ಪ್ರಕಾರ ಆಡಳಿತ ಪಕ್ಷದಲ್ಲಿ ಏಳೆಂಟು ಜನ ಹಿರಿಯ ಶಾಸಕರು ಅಥವಾ ಸಚಿವರು ಹೇಗಾದರೂ ಮುಖ್ಯಮಂತ್ರಿ ಆಗಬೇಕೆಂದು ಪೈಪೋಟಿಗೆ ಇಳಿದಿದ್ದಾರೆ.ಇದರ ಪರಿಣಾಮವಾಗಿ ಆಡಳಿತ ಯಂತ್ರ ಸಂಪೂರ್ಣವಾಗಿ ಕುಸಿದುಬಿದ್ದಿದೆ ಎಂದರು.

ಸಿದ್ದರಾಮಯ್ಯರ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ರೈತರ ಬಗ್ಗೆ ಅಸಡ್ಡೆ ತೋರುತ್ತ ಬಂದಿದೆ. ಕಿಸಾನ್ ಸಮ್ಮಾನ್ ಯೋಜನೆಯನ್ನು ಪ್ರಧಾನಿಯವರು ಜಾರಿಗೊಳಿಸಿದ್ದರು. ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರಕಾರ 4 ಸಾವಿರ ಹೆಚ್ಚುವರಿಯಾಗಿ ನೀಡಿತ್ತು. ಅದಕ್ಕೆ ಕಲ್ಲುಹಾಕಿದ್ದಾರೆ ಎಂದು ಆಕ್ಷೇಪಿಸಿದರು. ಬಸವರಾಜ ಬೊಮ್ಮಾಯಿಯವರು ರೈತ ವಿದ್ಯಾನಿಧಿ ಜಾರಿಗೊಳಿಸಿದರು. ಅದಕ್ಕೂ ಕಲ್ಲು ಹಾಕಿದರು ಎಂದು ದೂರಿದರು.

 


Share this with Friends

Related Post