Mon. Dec 23rd, 2024

ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ವಿಕಲ ಚೇತನರ ಧರಣಿ ಸತ್ಯಾಗ್ರಹ

Share this with Friends

ಬೆಂಗಳೂರು, ಫೆ.27: ಪೌರ ಕಾರ್ಮಿಕರಂತೆ ಖಾಯಂಗೊಳಿಸಿ ಇಲ್ಲವೇ ಗ್ರಂಥಪಾಲಕರಂತೆ ಕನಿಷ್ಠ ವೇತನ ಜಾರಿ ಮಾಡಿ ಎಂಬ ಘೋಷ ವಾಕ್ಯದೊಂದಿಗೆ ವಿಕಲಚೇತನರು ಧರಣಿ ನಡೆಸಿದರು.

ಬೆಂಗಳೂರಿನ ಫ್ರೀಡಂ ಪಾರ್ಕನಲ್ಲಿ ನಿನ್ನೆಯಿಂದ ಇಂದಿನವರೆಗೂ ಧರಣಿ ಸತ್ಯಾಗ್ರಹ ನಡೆಸಿ ಮನವಿ ಪತ್ರವನ್ನು ಸರ್ಕಾರಕ್ಕೆ‌ ರವಾನಿಸಿದ್ದಾರೆ.

ಕರ್ನಾಟಕ ಸರ್ಕಾರದ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧೀನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗೌರವಧನ ಕಾರ್ಯಕರ್ತರಾದ ಎಂ ಆರ್ ಡಬ್ಲ್ಯು, ಯು‌ ಆರ್ ಡಬ್ಲ್ಯು,ವಿ ಆರ್ ಡಬ್ಲ್ಯು ವಿಕಲಚೇತನರ ಹುದ್ದೆಗಳನ್ನು ಖಾಯಂಗೊಳಿಸುವಂತೆ ಅಥವಾ ಕನಿಷ್ಠ ವೇತನ ಜಾರಿಗೊಳಿಸುವಂತೆ ಒತ್ತಾಯಿಸಿ ಇಂದೂ ಕೂಡಾ ಧರಣಿ ಮುಂದುವರಿಸಿದರು.

ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ವಿರೋಧ ಪಕ್ಷದ ನಾಯಕರಾಗಿದ್ದಾಗ ಫ್ರೀಡಂ ಪಾರ್ಕನಲ್ಲಿ ನಡೆಯುತ್ತಿದ್ದ ನಮ್ಮ ಧರಣಿ ಸತ್ಯಾಗ್ರಹಕ್ಕೆ ಆಗಮಿಸಿ, ಮುಂದಿನ ಬಾರಿ ನಾನು ನಿಮ್ಮೆಲ್ಲರ ಆಶೀರ್ವಾದದಿಂದ ಮುಖ್ಯಮಂತ್ರಿಯಾದರೆ, ನಿಮ್ಮ ಹುದ್ದೆಗಳನ್ನು ಖಾಯಂಗೊಳಿಸುವುದಾಗಿ ಆಶ್ವಾಸನೆ ನೀಡಿದ್ದರು,ಈಗ ಅಧಿಕಾರಕ್ಕೆ ಬಂದ ಮೇಲೆ ಅದನ್ನು ಮರೆತಂತೆ ಕಾಣುತ್ತಿದೆ ಎಂದು ಧರಣಿ ನಿರತರ ಪರವಾಗಿ ಸಂಘದ ಸಂಸ್ಥಾಪಕ ಅಧ್ಯಕ್ಷ ಅಂಬಾಜಿ ಪಿ.ಮೇಟಿ ತಿಳಿಸಿದರು.

2023 ರ ಜೂನ್ 15 ರಂದು ಸೇವೆಯನ್ನು ಖಾಯಂಗೊಳಿಸುವಂತೆ ಆಗ್ರಹಿಸಿ ನವ ಕರ್ನಾಟಕ ವಿಕಲಚೇತನರ ಗೌರವಧನ ಕಾರ್ಯಕರ್ತರ ಸಂಘವು ಫ್ರೀಡಂ ಪಾರ್ಕ್ನಲ್ಲಿ ಹಮ್ಮಿಕೊಂಡ ಧರಣಿ ಸತ್ಯಾಗ್ರಹದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಬಂದು ನಮ್ಮ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿ ಕಾಲಾವಕಾಶ ಕೋರಿ ಮುಂದಿನ ಬೆಳಗಾವಿ ಅಧಿವೇಶನದಲ್ಲಿ ಬೇಡಿಕೆಗಳನ್ನು ಈಡೇರಿಸು ಭರವಸೆ ನೀಡಿದ್ದರು ಕೂಡಲೇ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಅವರು ಒತ್ತಾಯಿಸಿದರು.


Share this with Friends

Related Post