Fri. Mar 6th, 2026

ರೈತರ ಹೋರಾಟಕ್ಕೆ ನ್ಯಾಯ ಸಿಗುವವರೆಗೆ ವಿರಮಿಸುವುದಿಲ್ಲ: ವಿಜಯೇಂದ್ರ

Share this with Friends

ಬೆಳಗಾವಿ: ನಾನು ಯಡಿಯೂರಪ್ಪನವರ ಮಗನಾಗಿ, ಬಿಜೆಪಿ ರಾಜ್ಯಾಧ್ಯಕ್ಷನಾಗಿ ರೈತಪರವಾಗಿ ಸದಾ ನಿಲ್ಲುತ್ತೇನೆ, ರೈತರ ಹೋರಾಟಕ್ಕೆ ನ್ಯಾಯ ಸಿಗುವವರೆಗೆ ವಿರಮಿಸುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ.

ಭ್ರಷ್ಟ ಕಾಂಗ್ರೆಸ್ ಸರ್ಕಾರದ ರೈತವಿರೋಧಿ ನೀತಿಯನ್ನು ಖಂಡಿಸಿ ಬಿಜೆಪಿ ವತಿಯಿಂದ ಇಂದು “ಮಾಲಿನಿ ಸಿಟಿ ಮೈದಾನ”ದಲ್ಲಿ ನಡೆದ ಬೃಹತ್ ಪ್ರತಿಭಟನೆ ಸಂದರ್ಭದಲ್ಲಿ ಮಾತನಾಡಿದ ಅವರು, ರೈತ ವಿರೋಧಿ ಸರಕಾರಕ್ಕೆ ಉಳಿಗಾಲವಿಲ್ಲ.ನಾಡಿನ ರೈತರ ಸಂಕಷ್ಟಕ್ಕೆ ನೀವು ಸ್ಪಂದಿಸಿದ್ದೀರಾ? ಭತ್ತ, ಕಬ್ಬು, ಹತ್ತಿ, ಮೆಕ್ಕೆಜೋಳ ಮೊದಲಾದ ಉತ್ಪನ್ನ ಬೆಳೆಯುವ ರೈತರ ಮತ್ತು ಅನ್ನದಾತರ ಸಂಕಷ್ಟಕ್ಕೆ ನೀವು ಸ್ಪಂದಿಸಿಲ್ಲ, ಅತಿವೃಷ್ಟಿ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ನೆಲದ ಮೇಲೆ ಓಡಾಡಲಿಲ್ಲ; ವೈಮಾನಿಕ ಸಮೀಕ್ಷೆ ಮಾಡಿದ್ದರು ಎಂದು ಆಕ್ಷೇಪಿಸಿದರು.

ಕಾಂಗ್ರೆಸ್ ಸರಕಾರದ ರೈತವಿರೋಧಿ ನೀತಿಯನ್ನು ಅರ್ಥ ಮಾಡಿಕೊಳ್ಳಬೇಕು. ಎಫ್‍ಆರ್‍ಪಿಗಿಂತ ಹೆಚ್ಚು ಕನಿಷ್ಠ ಬೆಂಬಲ ಬೆಲೆ ನೀಡಲು ಅವಕಾಶವಿದೆ. ಆದರೆ, ಇದನ್ಯಾಕೆ ಮಾಡಿಲ್ಲ ಸಿದ್ದರಾಮಯ್ಯನವರೇ. ಇದೊಂದು ಲಜ್ಜೆಗೆಟ್ಟ ಸರಕಾರವಾಗಿದೆ.ಸದನದಲ್ಲಿ ಇದನ್ನೆಲ್ಲಾ ಪ್ರಸ್ತಾಪ ಮಾಡುತ್ತೇವೆ, ಉತ್ತರ ಕರ್ನಾಟಕದ ಸಮಸ್ಯೆಗಳು, ರೈತರ ಸಂಕಷ್ಟದ ಕುರಿತು ಸದನದಲ್ಲಿ ಚರ್ಚೆ ಮಾಡಿ ಎಂದು ಆಗ್ರಹಿಸಿದರು.

ಯಡಿಯೂರಪ್ಪ ಅವರ ರೈತಪರ ನಿರಂತರ ಹೋರಾಟವನ್ನು ನೆನಪಿಸಿದ ವಿಜಯೇಂದ್ರ, ನಾನು ಯಡಿಯೂರಪ್ಪನವರ ಮಗನಾಗಿ, ಬಿಜೆಪಿ ರಾಜ್ಯಾಧ್ಯಕ್ಷನಾಗಿ ರೈತಪರವಾಗಿ ಸದಾ ನಿಲ್ಲುವುದಾಗಿ ಹೇಳಿದರು. ರೈತರ ಹೋರಾಟಕ್ಕೆ ನ್ಯಾಯ ಸಿಗುವವರೆಗೆ ವಿರಮಿಸುವುದಿಲ್ಲ ಎಂದು ತಿಳಿಸಿದರು.


Share this with Friends

Related Post