Mon. Dec 23rd, 2024

ಸ್ಪೀಕರ್‌ ಕಛೇರಿಯಲ್ಲಿ ಘೋಷಣೆ ಕೂಗಿದ 15 ಬಿಜೆಪಿ ಶಾಸಕರ ಅಮಾನತು

Himachal Pradesh
Share this with Friends

ಶಿಮ್ಲಾ. ಫೆ.28 : ಸ್ಪೀಕರ್ ಚೇಂಬರ್‌ನಲ್ಲಿ ಘೋಷಣೆಗಳನ್ನು ಕೂಗಿದ ಆರೋಪದ ಮೇಲೆ ಪ್ರತಿಪಕ್ಷ ನಾಯಕ ಜೈರಾಮ್ ಠಾಕೂರ್ ಸೇರಿದಂತೆ 15 ಬಿಜೆಪಿ ಶಾಸಕರನ್ನು ಹಿಮಾಚಲ ಪ್ರದೇಶ ವಿಧಾನಸಭೆ ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಅಮಾನತುಗೊಳಿಸಿದ್ದಾರೆ.

ವಿಪಿನ್ ಸಿಂಗ್ ಪರ್ಮಾರ್, ರಣಧೀರ್ ಶರ್ಮಾ, ಲೋಕೇಂದರ್ ಕುಮಾರ್, ವಿನೋದ್ ಕುಮಾರ್, ಹನ್ಸ್ ರಾಜ್, ಜನಕ್ ರಾಜ್, ಬಲ್ಬೀರ್ ವರ್ಮಾ, ತ್ರಿಲೋಕ್ ಜಮ್ವಾಲ್, ಸುರೇಂದರ್ ಶೋರಿ, ದೀಪ್ ರಾಜ್, ಪುರಾನ್ ಠಾಕೂರ್, ಇಂದರ್ ಸಿಂಗ್ ಗಾಂಧಿ, ದಿಲೀಪ್ ಠಾಕೂರ್ ಮತ್ತು ಇಂದರ್ ಸಿಂಗ್ ಗಾಂಧಿ ಅಮಾನತುಗೊಂಡ ಇತರ 14 ಶಾಸಕರು.

68 ಸದಸ್ಯರ ವಿಧಾನಸಭೆಯಲ್ಲಿ 40 ಶಾಸಕರನ್ನು ಹೊಂದಿರುವ ಕಾಂಗ್ರೆಸ್ಗೆ ಇ ದು ದೊಡ್ಡ ಹಿನ್ನಡೆಯಾಗಿದೆ. ರಾಜ್ಯದಲ್ಲಿ ಬಿಜೆಪಿ 25 ಶಾಸಕರನ್ನು ಹೊಂದಿದ್ದು, ಮೂವರು ಶಾಸಕರು ಸ್ವತಂತ್ರರಾಗಿದ್ದಾರೆ. ಈ ನಡುವೆ ಹಿಮಾಚಲ ಪ್ರದೇಶದ 15 ಬಿಜೆಪಿ ಶಾಸಕರನ್ನು ಸ್ಪೀಕರ್‌ ಅಮಾನತ್ತು ಮಾಡಿದ್ದಾರೆ.

ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾದ ಬಿಜೆಪಿ :
ಜೈರಾಮ್ ಠಾಕೂರ್ ನೇತೃತ್ವದ ಹಿಮಾಚಲಪ್ರದೇಶದ ಬಿಜೆಪಿ ಶಾಸಕಾಂಗ ಪಕ್ಷದ ಸದಸ್ಯರು ರಾಜ್ಯಪಾಲ ಶಿವ ಪ್ರತಾಪ್ ಶುಕ್ಲಾ ಅವರನ್ನು ಭೇಟಿಯಾಗಿದ್ದಾರೆ. ಹಿಮಾಚಲ ಪ್ರದೇಶ ವಿಧಾನಸಭೆಯಲ್ಲಿ ಸುಖ್ವಿಂದರ್ ಸಿಂಗ್ ನೇತೃತ್ವದ ಕಾಂಗ್ರೆಸ್ ಸರಕಾರ ಬಹುಮತ ಸಾಬೀತು ಪಡಿಸುವಂತೆ ಸೂಚನೆ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಹಾಗೂ ಇನ್ನಿತರ ಬಿಜೆಪಿ ಶಾಸಕರು ಹಿಮಾಚಲ ಪ್ರದೇಶದ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಮಾಡಿದರು.

ಹಿಮಾಚಲ ಪ್ರದೇಶ ವಿಧಾನಸಭೆಯಿಂದ ರಾಜ್ಯ ಸಭೆಯ ಏಕೈಕ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅತೃಪ್ತ ಶಾಸಕರು ಅಡ್ಡ ಮತದಾನ ಮಾಡಿ ಬಿಜೆಪಿ ಅಭ್ಯರ್ಥಿಯ ಗೆಲುವಿಗೆ ಕಾರಣರಾಗಿದ್ದರು. ಬಿಜೆಪಿ ಗೆಲುವು ಸಾಧಿಸಿದ ಮರು ದಿನ ಈ ಬೆಳವಣಿಗೆ ನಡೆದಿದೆ. 68 ಸದಸ್ಯ ಬಲದ ಹಿಮಾಚಲಪ್ರದೇಶ ವಿಧಾನಸಭೆಯಲ್ಲಿ ಕಾಂಗ್ರೆಸ್ನ 40, ಬಿಜೆಪಿಯ 25 ಶಾಸಕರಿದ್ದಾರೆ. ಉಳಿದ 3 ಕ್ಷೇತ್ರಗಳಲ್ಲಿ ಪಕ್ಷೇತರ ಶಾಸಕರಿದ್ದಾರೆ.


Share this with Friends

Related Post