Mon. Dec 23rd, 2024

ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ

Share this with Friends

ಮಂಗಳೂರು,ಮಾ.4: ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ.

ದ್ವಿತೀಯ ಪಿಯುಸಿ ಅಲೀನಾ ಸಿಬಿ, ಅರ್ಚನಾ, ಅಮೃತ ಎಂಬ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆದಿದ್ದು ಮೂವರೂ‌ ಗಂಭೀರವಾಗಿ ‌ಗಾಯಗೊಂಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಸರ್ಕಾರಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು ಮೂವರು ವಿದ್ಯಾರ್ಥಿನಿಯರು ಶಾಲಾ ವರಾಂಡದಲ್ಲಿ ಪರೀಕ್ಷಾ ತಯಾರಿ ನಡೆಸುವ ವೇಳೆ ಮಾಸ್ಕ್ ಹಾಗೂ ಹ್ಯಾಟ್ ಧರಿಸಿ ಬಂದ ಯುವಕ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ಎರಚಿ ಓಡಿದ್ದಾನೆ.

ಆದರೆ ಈ ವೇಳೆ ಇತರೆ ವಿದ್ಯಾರ್ಥಿಗಳು ಧಾವಿಸಿ ಓಡಿಹೋಗುತ್ತಿದ್ದ ಯುವಕನನ್ನು ಹಿಡಿದಿದ್ದಾರೆ.ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಕಡಬ ಪೊಲೀಸರು ಅರೋಪಿಯನ್ನು‌ ವಶಕ್ಕೆ ಪಡೆದು‌ ವಿಚಾರಣೆ ನಡೆಸುತ್ತಿದ್ದು,ಈತ ಕೇರಳ ಮೂಲದವನೆಂದು ಗೊತ್ತಾಗಿದೆ.

ವಿದ್ಯಾರ್ಥಿನಿಯರ ಮುಖಕ್ಕೆ ಗಂಭೀರ ಗಾಯಗಳಾಗಿದ್ದು, ಕಡಬ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆ ಗಾಗಿ ಮಂಗಳೂರಿಗೆ ರವಾನಿಸಲಾಗಿದೆ.


Share this with Friends

Related Post