Fri. Nov 1st, 2024

ನಟ ದರ್ಶನ್ ಗಿಲ್ಲ ಸಧ್ಯಕ್ಕೆ ಮನೆ ಊಟ

Share this with Friends

ಬೆಂಗಳೂರು,ಜು.25: ನಟ ದರ್ಶನ್‌ಗೆ ನ್ಯಾಯಾಲಯ ಶಾಕ್‌ ನೀಡಿದ್ದು, ಮನೆಯೂಟದ ಅವಕಾಶ ನೀಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಮ್ಯಾಜಿಸ್ಟ್ರೇಟ್‌ ಕೋರ್ಟ್‌ ವಜಾಗೊಳಿಸಿದೆ.

ಮನೆಯಿಂದ ಊಟ ಮತ್ತು ಹಾಸಿಗೆ ಸೌಲಭ್ಯ ಪಡೆಯುವುದಕ್ಕೆ ಅನುಮತಿ ಕೋರಿ ದರ್ಶನ್ ಪರ ವಕೀಲರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಜುಲೈ 25ಕ್ಕೆ ಆದೇಶ ಕಾಯ್ದಿರಿಸಿತ್ತು.

ಇಂದು ದರ್ಶನ್‌ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ,ಹಾಗಾಗಿ ಸಧ್ಯಕ್ಕೆ ದರ್ಶನ್‌ ಗೆ ಮನೆ ಊಟ ಲಭ್ಯವಿಲ್ಲದಂತಾಗಿದೆ.

ಸೆಕ್ಷನ್ 30 ರ ಪ್ರಕಾರ ಜೈಲಿನಲ್ಲಿ ಇರುವ ಆರೋಪಿ ಮನೆಯ ಊಟ ಪಡೆಯಬಹುದು. ಅಲ್ಲದೇ ಮನೆಯಿಂದ ಹಾಸಿಗೆ ವ್ಯವಸ್ಥೆ ಮತ್ತು ಪುಸ್ತಕಗಳನ್ನು ಹೊಂದುವ ಅವಕಾಶ ಇದೆ ಈ ಎಲ್ಲಾ ಅವಕಾಶಗಳನ್ನು ಆರೋಪಿಗಳಿಗೆ ಒದಗಿಸಿಕೊಡಬಹುದು ಎಂದು ದರ್ಶನ್ ಪರ ವಕೀಲರು ವಾದ ಮಂಡಿಸಿದ್ದರು.

ಈ ಹಿಂದೆ ಕುಖ್ಯಾತ ಆರೋಪಿ ಚಾರ್ಲ್ಸ್ ಶೋಭರಾಜ್‌ಗೆ ಕೂಡ ಮನೆಯ ಊಟ ಕಲ್ಪಿಸಲಾಗಿತ್ತು. ಯಾವಾಗ ಆರೋಪಿ, ಅಪರಾಧಿ ಎಂದು ಕೋರ್ಟ್‌ ಶಿಕ್ಷೆ ನೀಡುತ್ತದೋ ಅಲ್ಲಿಯವರೆಗೆ ಈ ಎಲ್ಲಾ ಅವಕಾಶವನ್ನು ಬಳಸಿಕೊಳ್ಳಬಹುದು ಎಂದು ದರ್ಶನ್ ಪರ ವಕೀಲರು ಹೇಳಿದರು

ಆಹಾರ ಅಜೀರ್ಣವಾಗುತ್ತಿದೆ, ಪುಡ್ ಪಾಯಿಸನ್ ಆಗಿದೆ, ಭೇದಿ ಆಗುತ್ತಿದೆ ಎಂದು ಮೆಡಿಕಲ್ ವರದಿಯನ್ನು ಸಲ್ಲಿಕೆ ಮಾಡಲಾಗಿದೆ. ಆದರೆ ಒಂದು ಬಾರಿಯೂ ಭೇದಿ ಆಗಿದೆ ಎಂದು ಆಸ್ಪತ್ರೆಯಲ್ಲಿ ದರ್ಶನ್‌ ಚಿಕಿತ್ಸೆ ಪಡೆದಿಲ್ಲ ಎಂದು ಪೊಲೀಸರು ವಾದ ಮಂಡಿಸಿದರು.

ದರ್ಶನ್ ಅವರು ಮುರಿದಿರುವ ಕೈ ಬಗ್ಗೆ ಮಾತ್ರ ಚಿಕಿತ್ಸೆ ಪಡೆಯುತ್ತಿದ್ದಾರೆ, ಅವರಿಗೆ ಈಗ ವೈರಲ್‌ ಫೀವರ್‌ ಇದ್ದು ಚಿಕಿತ್ಸೆ ನೀಡಲಾಗುತ್ತಿದೆ. ಮೈಸೂರಿನಲ್ಲಿ ದರ್ಶನ್ ಅವರಿಗೆ ಮೂರು ತಿಂಗಳ ಹಿಂದೆ ಆರ್ಥೋ ಅಪರೇಷನ್ ಆಗಿತ್ತು. ಜೈಲಿನಲ್ಲಿ ಬಂದಾಗ ಅದರ ನೋವು ಪ್ರಾರಂಭವಾಗಿದ್ದು ಇದಕ್ಕೆ ಎಕ್ಸ್ ರೇ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಜೈಲಿನ ನಿಯಮಗಳ ಪ್ರಕಾರ ಮನೆಯ ಊಟ ಎನ್ನುವುದರ ಬಗ್ಗೆ ಉಲ್ಲೇಖ ಇಲ್ಲ. ಅನಾರೋಗ್ಯದ ಸಮಯದಲ್ಲಿ ಮಾತ್ರ ವಿಶೇಷ ಊಟ ನೀಡಬಹುದೆ ಹೊರತು ಮನೆಯ ಊಟವನ್ನೇ ನೀಡಬೇಕು ಎಂದು ಎಲ್ಲೂ ಉಲ್ಲೇಖ ಮಾಡಿಲ್ಲ ಎಂದು ಹೇಳಿದ್ದಾರೆ.

ಅನಾರೋಗ್ಯದ ವೇಳೆ ವಿಶೇಷ ಕಾಳಜಿ ಆಹಾರ ನೀಡಬೇಕು. ವಾರದಲ್ಲಿ ಒಮ್ಮೆ ಮಾತ್ರ ಮಾಂಸಾಹಾರದ ಊಟ ಕೊಡಬಹುದು. ಅದನ್ನು ಬಿಟ್ಟು ಪ್ರತಿ ದಿನ ಬಿರಿಯಾನಿ ತಿನ್ನಬೇಕು ಎಂದರೆ ನೀಡಲು ಸಾಧ್ಯವಿಲ್ಲ, ಹಾಗಾಗಿ ಮನೆಯ ಊಟವನ್ನು ನೀಡುವಂತಿಲ್ಲ ಎಂದು ವಾದ ಮಾಡಿದ್ದಾರೆ.

ಆರೋಪಿಗೆ ಭೇದಿ ಆಗುತ್ತಿದ್ದರೆ ಉಪ್ಪು ಖಾರ ಇಲ್ಲದ ಸಾತ್ವಿಕ ಆಹಾರ ನೀಡಬೇಕು, ಕುಡಿಯಲು ಬಿಸಿ ನೀರು ಬೇಕು ಅಂದರೆ ಜ್ವರ ಇದ್ದಾಗ ಮಾತ್ರ ನೀಡ್ತಾರೆ. ಅದನ್ನ ಬಿಟ್ಟು ಪ್ರತಿ ದಿನ ಸ್ನಾನ ಮಾಡಲು ಬಿಸಿ ನೀರು ಕೊಡಲು ಸಾಧ್ಯವಿಲ್ಲ. ಅನಾರೋಗ್ಯ ಇದ್ದರೆ 15 ದಿನ ಮಾತ್ರ ವಿಶೇಷವಾಗಿ ಅವಕಾಶ ನೀಡಬಹುದು ಎಂದು ನ್ಯಾಯಾಧೀಶರಿಗೆ ಪೊಲೀಸರು ತಿಳಿಸಿದರು.


Share this with Friends

Related Post