Mon. Dec 23rd, 2024

ಶ್ರೀಗಳ ಆಶೀರ್ವಾದ ಪಡೆದ ಮೈತ್ರಿಕೂಟದ ಅಭ್ಯರ್ಥಿಗಳು

Share this with Friends

ಬೆಂಗಳೂರು, ಏ.10: ಆದಿಚುಂಚನಗಿರಿ ಮಠದ ಡಾ. ನಿರ್ಮಲಾನಂದ ನಾಥ ಶ್ರೀಗಳನ್ನು ಮೈತ್ರಿ ಪಕ್ಷದ ನಾಯಕರು ಹಾಗೂ ಅಭ್ಯರ್ಥಿಗಳು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು.

ಮಾಜಿ ಮುಖ್ಯಮಂತ್ರಿ
ಹೆಚ್.ಡಿ.ಕುಮಾರಸ್ವಾಮಿ, ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅವರ ನೇತೃತ್ವದಲ್ಲಿ ಜೆಡಿಎಸ್, ಬಿಜೆಪಿ ನಾಯಕರು ಮಹಾಸ್ವಾಮೀಜಿ ಅವರ ಆಶೀರ್ವಾದ ಪಡೆದರು.

ಜೆಡಿಎಸ್ ರಾಜ್ಯ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಮೈತ್ರಿಕೂಟದ ಅಭ್ಯರ್ಥಿಗಳಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ವಿ.ಸೋಮಣ್ಣ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಡಾ.ಸಿ.ಎನ್.ಮಂಜುನಾಥ್, ತೇಜಸ್ವಿ ಸೂರ್ಯ, ಪಿ.ಸಿ.ಮೋಹನ್, ಮಲ್ಲೇಶ್ ಬಾಬು, ಡಾ.ಕೆ.ಸುಧಾಕರ್, ಮಾಜಿ ಉಪ ಮುಖ್ಯಮಂತ್ರಿಡಾ.ಸಿ.ಎನ್.ಅಶ್ವತ್ಥನಾರಾ
ಯಣ, ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮಾಜಿ ಸಚಿವರಾದ ಆರಗ ಜ್ಞಾನೇಂದ್ರ, ಕೆ.ಗೋಪಾಲಯ್ಯ, ಡಾ.ಕೆ.ಸಿ.ನಾರಾಯಣಗೌಡ ಸೇರಿದಂತೆ ಎರಡೂ ಪಕ್ಷಗಳ ನಾಯಕರು ಹಾಜರಿದ್ದರು.

ಈ ವೇಳೆ ನಿರ್ಮಲಾನಂದನಾಥ ಶ್ರೀಗಳು ಮೈತ್ರಿ ಅಭ್ಯರ್ಥಿಗಳಿಗೆ ಶಾಲು ಹೊದಿಸಿ ಹಾರ ಹಾಕಿ ಗೌರವಿಸಿ ಶುಭವಾಗಲೆಂದು ಹಾರೈಸಿದರು.


Share this with Friends

Related Post