Fri. Nov 1st, 2024

ಅಯೋಧ್ಯಾ ರಾಮಮಂದಿರಕ್ಕೆ ಎಂ ಎಸ್ ರಾಮಯ್ಯ ಸಂಸ್ಥೆಯಿಂದ ಆಂಬ್ಯುಲೆನ್ಸ್

Share this with Friends

ಬೆಂಗಳೂರು,ಏ.5: ಬೆಂಗಳೂರಿನ ಡಾ ಎಂ ಎಸ್ ರಾಮಯ್ಯ ಸಮೂಹ ಸಂಸ್ಥೆಗಳ ವತಿಯಿಂದ ಅಯೋಧ್ಯೆ ರಾಮಮಂದಿರಕ್ಕೆ
ಸುಸಜ್ಜಿತ ಅಂಬ್ಯುಲೆನ್ಸ್ ನೀಡಲಾಯಿತು.

ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ಮೂಲಕ ಸುಸಜ್ಜಿತ ಅಂಬ್ಯುಲೆನ್ಸ್ ಅನ್ನು ಶುಕ್ರವಾರ ಅಯೋಧ್ಯೆಯಲ್ಲೇ ಹಸ್ತಾಂತರಿಸಲಾಯಿತು .

ರಾಮಮಂದಿರಕ್ಕೆ ಪ್ರತಿನಿತ್ಯ ಬರುತ್ತಿರುವ ಲಕ್ಷಾಂತರ ಭಕ್ತರ ತುರ್ತು ಆರೋಗ್ಯ ಸೇವೆಗಾಗಿ ಅಂಬ್ಯುಲೆನ್ಸ್ ಒದಗಿಸುವ ಇಂಗಿತವನ್ನು ಸಂಸ್ಥೆಯ ಪ್ರಮುಖರಾದ ಪಟ್ಟಾಭಿರಾಮ್ ಅವರು ಶ್ರೀಗಳರಲ್ಲಿ ವ್ಯಕ್ತಪಡಿಸಿದ್ದರು .

ಅದರಂತೆ ಸುಮಾರು 38 ಲಕ್ಷ ರೂ ವೆಚ್ಚದ ಸುಸಜ್ಜಿತವಾದ ನೂತನ ಅಂಬ್ಯುಲೆನ್ಸ್ ಅನ್ನು ಅಯೋಧ್ಯೆಯಲ್ಲಿ ಪಟ್ಟಾಭಿರಾಮ್ ಮತ್ತು ಅನಿತಾ ಪಟ್ಟಾಭಿರಾಮ್ ಅವರು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಗೆ ಹಸ್ತಾಂತರಿಸಿದರು.

ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್, ಕೋಶಾಧಿಕಾರಿ‌ ಶ್ರೀ ಸ್ವಾಮಿ ಗೋವಿಂದ ಗಿರಿ ಮಹಾರಾಜ್ , ಸದಸ್ಯರಾದ ಶ್ರೀ ಪೇಜಾವರ ಶ್ರೀಗಳು, ಅನಿಲ್ ಮಿಶ್ರಾ , ವಿಹಿಂಪ ರಾಷ್ಟ್ರೀಯ ಮುಖಂಡ ಗೋಪಾಲ್ ಜಿ ,ಪೇಜಾವರ ಮಠದ ಅಧಿಕಾರಿಗಳಾದ ಶ್ರೀವತ್ಸ ತಂತ್ರಿ , ಶ್ರೀಗಳ ಆಪ್ತರಾದ ಶ್ರೀನಿವಾಸ ಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.

ಈ ವೇಳೆ ಮಾತನಾಡಿದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ನನ್ನ ಭಕ್ತರ ಯೋಗಕ್ಷೇಮ ನೋಡಿಕೊಳ್ಳುವುದೂ ನನಗೆ ಸಲ್ಲುವ ಉತ್ತಮ ಸೇವೆಯೇ ಆಗಿದೆ ಎಂದು ಸ್ವಯಂ ಭಗವಂತನೇ ಹೇಳಿದ್ದಾನೆ ಹಾಗಿರುವಾಗ ರಾಮಮಂದಿರಕ್ಕೆ ಆಗಮಿಸುವ ಭಕ್ತರ ತುರ್ತು ಪ್ರಯೋಜನಕ್ಕಾಗಿ ಅಗತ್ಯವಿದ್ದ ಅಂಬ್ಯುಲೆನ್ಸ್ ನ್ನು ನೀಡುವ ಮೂಲಕ ಎಂ ಎಸ್ ರಾಮಯ್ಯ ಸಂಸ್ಥೆಯವರು ರಾಮನಿಗೆ ಶ್ರೇಷ್ಠ ಸೇವೆ ಸಲ್ಲಿಸಿದ್ದಾರೆ ಎಂದು ಬಣ್ಣಿಸಿದ್ದಾರೆ.


Share this with Friends

Related Post