ಬೆಂಗಳೂರು, ಫೆ.19: ಬೆಂಗಳೂರಿನ ಪ್ರಬುದ್ಧ ಸಮಾಜ ನಿರ್ಮಾಣ ವೇದಿಕೆ ವತಿಯಿಂದ ಪ್ರಬುದ್ಧವಾದ ಒಂದು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಅದೇನೆಂದರೆ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣ ಅವರ ಕುರಿತು ಬೆಂಗಳೂರಿನ ಗಾಂಧಿ ಭವನದ ಬಾಪು ಸಭಾಂಗಣದಲ್ಲಿ ಮುಕ್ತ ಸಂವಾದವನ್ನು ಹಮ್ಮಿಕೊಳ್ಳಲಾಯಿತು.
ಸಿನಿಮಾ,ದಾರಾವಾಹಿ, ರಾಜಕೀಯ, ವ್ಯಾಪಾರ, ವ್ಯವಹಾರಗಳ, ಸ್ಪರ್ಧೆ- ವೇಗದ ಬದುಕಿನಲ್ಲಿ ಜೀವನದ ಮೌಲ್ಯಗಳು ಕಳೆದುಹೋಗುತ್ತಿರುವ ಕಾಲದಲ್ಲಿ ಜನಸಾಮಾನ್ಯರಿಗೆ ಬಸವ ತತ್ವದ ಅರಿವು ಮೂಡಿಸುವ ಒಂದು ಪ್ರಯತ್ನವನ್ನು ಪ್ರಬುದ್ಧ ಸಮಾಜ ನಿರ್ಮಾಣ ವೇದಿಕೆ ವತಿಯಿಂದ ಮಾಡಲಾಯಿತು.
ರಾಜ್ಯದ ಸಮ ಸಮಾಜ ಆಶಯದ ಪ್ರಬುದ್ಧ ಚಿಂತಕರು ಚರ್ಚೆ, ಸಂವಾದ, ಮಂಥನವನ್ನು ನಡೆಸಿದರು.
ಮಾನವ ಹಕ್ಕುಗಳ ಪರ ಹೋರಾಟಗಾರ್ತಿ ಅಕ್ಕೈ ಪದ್ಮಶಾಲಿ ಮತ್ತು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಫಾದರ್ ಅರುಣ್ ಲೂಯಿಸ್ ಎಸ್ ಜೆ ಮತ್ತು ಜನಾಬ್ ಮೌಲಾನ ಮಹಮ್ಮದ್ ಯೂಸುಫ್ ಕನ್ನಿ ದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
ಹಿರಿಯ ಸಾಹಿತಿಗಳು ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಪ್ರೊ. ಎಸ್. ಜಿ ಸಿದ್ದರಾಮಯ್ಯ ಅಧ್ಯಕ್ಷತೆ ವಹಿಸಿದ್ದರು.
ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತಪ ನ್ಯಾಯಾಧೀಶರಾದ ಎಚ್.ಎನ್. ನಾಗಮೋಹನ್ ದಾಸ್ ಅವರು ಬಸವ ತತ್ವದ ಮೂಲ ಆಶಯವೇ ಸಂವಿಧಾನ ಎಂಬ ವಿಷಯದ ಕುರಿತು ಮಾತನಾಡಿದರು.
ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು,ಸಾಮಾಜಿಕ ಚಿಂತಕ ಎಚ್.ಕೆ.ವಿವೇಕಾನಂದ ಮತ್ತಿತರರು ಪಾಲ್ಗೊಂಡಿದ್ದರು.