Wed. Jul 22nd, 2026

ಅಂಜಲಿ ಹತ್ಯೆ ಪ್ರಕರಣ:ಇನ್ಸ್‌ಪೆಕ್ಟರ್,ಹೆಡ್‌ ಕಾನ್ಸ್‌ಟೇಬಲ್ ಅಮಾನತು

Share this with Friends

ಹುಬ್ಬಳ್ಳಿ,ಮೇ.16: ಅಂಜಲಿ ಹತ್ಯೆ ಪ್ರಕರಣದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಮತ್ತು ಮುಖ್ಯಪೇದೆ ಅಮಾನತುಗೊಂಡಿದ್ದಾರೆ.

ಪ್ರಕರಣ ಸಂಬಂಧ ಬೆಂಡಿಗೇರಿ ಪೊಲೀಸ್ ಇನ್ಸ್‌ಪೆಕ್ಟರ್‌ ಚಂದ್ರಶೇಖರ ಚಿಕ್ಕೋಡಿ ಹಾಗೂ ಮುಖ್ಯಪೇದೆ ರೇಖಾ ಅವರನ್ನ ಅಮಾನತುಗೊಳಿಸಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ್‌ ಆದೇಶ ಹೊರಡಿಸಿದ್ದಾರೆ.

ಅಂಜಲಿ ಹತ್ಯೆಗೂ ಮುನ್ನ ಆರೋಪಿ ವಿಶ್ವನಿಂದ ಜೀವ ಬೆದರಿಕೆ ಇರುವುದಾಗಿ ಅಂಜಲಿ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು. ಆದರೆ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದರಿಂದ ಹತ್ಯೆ ನಡೆದಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದರು.

ಅಂಜಲಿ ಕುಟುಂಬಸ್ಥರು ಠಾಣೆಗೆ ಬಂದು ಹೋಗಿರುವ ದೃಶ್ಯ ಠಾಣೆಯ ಸಿಸಿಟಿವಿಯಲ್ಲಿ ಸೆರೆಯಾಗಿವೆ, ಹಾಗಾಗಿ ಇನ್ಸ್‌ಪೆಕ್ಟರ್ ಮತ್ತು ಹೆಡ್ ಕಾನ್ಸ್‌ಟೇಬಲ್ ಅಮಾನತು ಮಾಡಲಾಗಿದೆ.


Share this with Friends

Related Post