Thu. Jan 2nd, 2025

ದ್ವೇಷದ ರಾಜಕಾರಣಕ್ಕೆ ಮತ್ತೊಂದು ಹೆಸರೇ ಕಾಂಗ್ರೆಸ್:ಅಶೋಕ್

Share this with Friends

ಬೆಂಗಳೂರು, ಜೂ.14: ದ್ವೇಷದ ರಾಜಕಾರಣಕ್ಕೆ ಮತ್ತೊಂದು ಹೆಸರೇ ಕಾಂಗ್ರೆಸ್ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.

ದ್ವೇಷ, ಅಸೂಯೆ ರಾಜಕಾರಣ ಕಾಂಗ್ರೆಸ್ ನ ಹುಟ್ಟುಗುಣ ಎನ್ನುವುದು ಯಡಿಯೂರಪ್ಪನವರ ವಿಷಯದಲ್ಲಿ ಸರ್ಕಾರ ತಾಳುತ್ತಿರುವ ಧೋರಣೆಯಿಂದ ಮತ್ತೊಮ್ಮೆ ಸಾಬೀತಾಗಿದೆ ಎಂದು ಅಶೋಕ್ ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.

ಈ ಹಿಂದೆ ಸ್ವತಃ ಗೃಹ ಸಚಿವ ಪರಮೇಶ್ವರ್ ಅವರೇ ದೂರು ಕೊಟ್ಟ ಮಹಿಳೆ ಮಾನಸಿಕ ಅಸ್ವಸ್ಥೆ, ಆಕೆ ದುರುದ್ದೇಶಪೂರಿತವಾಗಿ ದೂರು ನೀಡಿದ್ದಾಳೆ, ಈ ಪ್ರಕರಣದಲ್ಲಿ ಯಾವುದೇ ಹುರುಳಿಲ್ಲ ಎಂದು ಹೇಳಿಕೆ ನೀಡಿದ್ದರು.

ಆದರೆ ಈಗ ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನಿಂದ ಹತಾಶರಾಗಿರುವ ಕಾಂಗ್ರೆಸ್ ಹೈಕಮಾಂಡ್ ನಾಯಕರು ನೀಚ ದ್ವೇಷ ರಾಜಕಾರಣಕ್ಕೆ ಕಟ್ಟುಬಿದ್ದು ಯಡಿಯೂರಪ್ಪನವರ ತೇಜೋವಧೆ ಮಾಡಲು ಹೊರಟಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಯಡಿಯೂರಪ್ಪನವರಂತಹ ಮುತ್ಸದ್ಧಿ ನಾಯಕರ ತಂಟೆಗೆ ಬಂದರೆ ಕರ್ನಾಟಕದಲ್ಲಿ ಕಾಂಗ್ರೆಸ್ ನಿರ್ನಾಮವಾಗುವುದರಲ್ಲಿ ಸಂಶಯವೇ ಇಲ್ಲ ಎಂದು ಅಶೋಕ್ ಎಚ್ಚರಿಸಿದ್ದಾರೆ.


Share this with Friends

Related Post