Sat. Jan 4th, 2025

ರೇಣುಕಾಸ್ವಾಮಿ‌ ಕೊಲೆ ಕೇಸ್: ಮತ್ತೊಬ್ಬ ಸ್ಯಾಂಡಲ್‌ವುಡ್ ನಟ ಅರೆಸ್ಟ್

Share this with Friends

ಬೆಂಗಳೂರು,ಜೂ.13: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದು ಬಂಧಿತ ಆರೋಪಿಗಳ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.

ಸ್ಯಾಂಡಲ್ ವುಡ್ ನಟ ಪ್ರದೋಶ್ ಬಂಧಿತ ಆರೋಪಿ,ಈತ ಕನ್ನಡದ ಕೆಲ ಚಿತ್ರಗಳಾದ
ದರ್ಶನ್ ಜೊತೆಗಿನ ಬೃಂದಾವನ, ಬುಲ್ ಬುಲ್ ಚಿತ್ರಗಳಲ್ಲಿ ನಟಿಸಿದ್ದು,ಈತ ರೇಣುಕಾಸ್ವಾಮಿ ಕೊಲೆ ಪ್ರಕರಣದ A14 ಆರೋಪಿ.

ಈತ ದರ್ಶನ್ ಆಪ್ತ ವಲಯದಲ್ಲಿ ಗುರುತಿಸಿಕೊಂಡು ಹಿಂದೆ ಮುಂದೆ ಓಡಾಡಿಕೊಂಡಿದ್ದ,ಅಲ್ಲದೆ ಬಿಜೆಪಿ ಸಚಿವರೊಬ್ಬರ ಜೊತೆ ಆಪ್ತ ಸಹಾಯಕನಾಗಿ ಕೂಡ ಕೆಲಸ ಮಾಡಿದ್ದ,ಅಲ್ಲದೆ ಬಿಜೆಪಿ ಐಟಿ ವಿಭಾಗದಲ್ಲಿಯೂ ಕೆಲಸ ಮಾಡಿದ್ದ ಎಂದು ತಿಳಿದು ಬಂದಿದೆ.


Share this with Friends

Related Post