Fri. Dec 27th, 2024

ಸ್ಮಾರ್ತ ಬ್ರಾಹ್ಮಣ ಸಂಪ್ರದಾಯದಂತೆ ಅಪರ್ಣಾ ಅಂತ್ಯಕ್ರಿಯೆ

Share this with Friends

ಬೆಂಗಳೂರು,ಜು.12: ಕನ್ನಡಿಗರ ಮನಗೆದ್ದಿದ್ದ ನಿರೂಪಕಿ ಅಪರ್ಣಾ ಚಿರನಿದ್ರೆಗೆ ಜಾರಿದ್ದು,ಸ್ಮಾರ್ತ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ಬನಶಂಕರಿಯ ವಿದ್ಯುತ್ ಚಿತಾಗಾರದಲ್ಲಿ ನೆರವೇರಿತು‌.

ಬನಶಂಕರಿಯಲ್ಲಿರುವ ಅಪರ್ಣಾ ಸ್ವಗೃಹದಲ್ಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು, ಸಕಲ ಸರ್ಕಾರಿ ಮರ್ಯಾದೆ
ಬಳಿಕ ಹೊಯ್ಸಳ ಕರ್ನಾಟಕ ಭಾಗದ ಆಚರಣೆಯಂತೆ ವಿಧಿ ವಿಧಾನ ನಡೆಯಿತು.

ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅಪರ್ಣಾ ಅವರು ನಿನ್ನೆ ಸಂಜೆ ಬನಶಂಕರಿ 2ನೇ ಹಂತದಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು.

ಬೆಂಗಳೂರು ದೂರದರ್ಶನದಲ್ಲಿ ಸೀನಿಯರ್ ಗ್ರೇಡ್ ನಿರೂಪಕಿಯಾಗಿದ್ದ ಅಪರ್ಣಾ, ಆಕಾಶವಾಣಿ ನಿರೂಪಕಿಯಾಗಿ ಕೆಲಸ ನಿರ್ವಹಿಸಿದ್ದರು, ಕನ್ನಡದ ಯಶಸ್ವಿ ನಿರೂಪಕಿಯಾಗಿ 3 ದಶಕಗಳನ್ನು ಪೂರೈಸಿದ್ದಾರೆ.

ಕಿರುತೆರೆಯಲ್ಲಿ ‘ಮೂಡಲಮನೆ’, ‘ಮುಕ್ತ’ ಮುಂತಾದ ಧಾರಾವಾಹಿಗಳಲ್ಲಿ ಅಭಿನಯಿಸಿದ್ದ ಅಪರ್ಣಾ, 2013 ರಲ್ಲಿ ಬಿಗ್‌ಬಾಸ್ ಕನ್ನಡದ ಮೊದಲ ಸೀಸನ್‌ನಲ್ಲಿ ಭಾಗವಹಿಸಿದ್ದರು.

2015 ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ ‘ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಪಾತ್ರ ಮಾಡಿ ಮನೆ,ಮನೆಯ ಮಾತಾಗಿದ್ದರು.

2014 ರಲ್ಲಿ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಘೋಷಣೆಯಾಗುವ ಪ್ರಯಾಣಿಕರು ಹತ್ತುವ ಮತ್ತು ಇಳಿಯುವ ಸೂಚನೆಗೆ ಅಪರ್ಣಾ ಧ್ವನಿ ಗೂಡಿಸಿದ್ದರು.

ಅಪರ್ಣಾ ಮರಳಿ ಬಾರದ ದೂರದೂರಿಗೆ ಮೌನವಾಗಿ ಪಯಣಿಸಿಬಿಟ್ಟಿದ್ದಾರೆ.ಅಪರ್ಣಾ ಅಗಲಿಕೆಗೆ ಕನ್ನಡ ಚಿತ್ರರಂಗವಷ್ಟೇ ಅಲ್ಲಾ ಇಡೀ ನಾಡು ಕಂಬನಿ ಮಿಡಿದಿದೆ.


Share this with Friends

Related Post